ಬಿಬಿಎಂಪಿ ಮೈತ್ರಿ ಮಾಡಿಕೊಳ್ಳುವ ನಿರ್ಧಾರ ಕುಮಾರಣ್ಣನ ಹೆಗಲಿಗೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಮಹಾಪೌರ ಮತ್ತು ಉಪಮಹಾಪೌರ ಚುನಾವಣೆಯ ಮೈತ್ರಿ ವಿಚಾರವನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೆಗಲಿಗೆ ವಹಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು, ಬಿಬಿಎಂಪಿ ಮೈತ್ರಿ ವಿಚಾರವಾಗಿ ಗೃಹಸಚಿವ ರಾಮಲಿಂಗಾರೆಡ್ಡಿ ಅವರು ತಮ್ಮನ್ನು ಭೇಟಿ ಮಾಡಿದ್ದರು. ಮೈತ್ರಿ ವಿಷಯದ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವ ಜವಾಬ್ದಾರಿಯನ್ನು ಕುಮಾರಸ್ವಾಮಿ ಅವರಿಗೆ ವಹಿಸಲಾಗಿದೆ.
ಕುಮಾರಸ್ವಾಮಿ ಮಾತನಾಡಿ, ರಾಮಲಿಂಗಾರೆಡ್ಡಿ ಮತ್ತು ದೇವೇಗೌಡ ಅವರು ಚರ್ಚಿಸಿರುವ ಬಗ್ಗೆ ಮಾಹಿತಿ ಇಲ್ಲ. ಆದರೆ, ಏನು ಮಾತನಾಡಿದ್ದಾರೆ ಎಂಬುದರ ಬಗ್ಗೆ ತಿಳಿದುಕೊಳ್ಳುತ್ತೇನೆ. ಬಳಿಕ ಸಂಸದ ಕುಪ್ಪೇಂದ್ರ ರೆಡ್ಡಿ ಸೇರಿದಂತೆ ಪಕ್ಷದ ಮುಖಂಡರ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
Comments