ಸೆ.23ರಂದು ಕುಮಾರಣ್ಣಗೆ ಹೃದಯ ಶಸ್ತ್ರಚಿಕಿತ್ಸೆ ,15 ದಿನ ವಿಶ್ರಾಂತಿ

ಇತ್ತೀಚೆಗೆ ಹೆಚ್ಚು ಕೆಮ್ಮಿನಿಂದ ಬಳಲುತ್ತಿದ್ದ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಸೆಪ್ಟೆಂಬರ್ 23ರಂದು ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ...
ಸ್ವತಃ ಕುಮಾರಸ್ವಾಮಿ ಅವರು ಈ ಬಗ್ಗೆ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. 'ನನ್ನ ಹೃದಯದ ಟಿಷ್ಯೂ ವಾಲ್ವ್ ಬದಲಿಸುವ ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿದ್ದೇನೆ. 15 ದಿನ ವಿಶ್ರಾಂತಿ ಪಡೆದು ಬಳಿಕ ಎಂದಿನಂತೆ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇನೆ ಎಂದರು.
ಆದರೆ, ಈಚೆಗೆ ಕೆಮ್ಮು ನನ್ನನ್ನು ವಿಪರೀತವಾಗಿ ಬಾಧಿಸುತ್ತಿದ್ದು, ಇದರಿಂದ ಹೃದಯದ ಮೇಲೆ ಒತ್ತಡ ಹೆಚ್ಚುತ್ತಿದೆ. ಹೀಗಾಗಿ ಶಸ್ತ್ರಚಿಕಿತ್ಸೆ ಅನಿವಾರ್ಯವಾಗಿದೆ ಈ ಹಿನ್ನೆಲೆಯಲ್ಲಿ ನನ್ನ ಆರೋಗ್ಯದ ವಿಚಾರದಲ್ಲಿ ಯಾರೂ ಗೊಂದಲಕ್ಕೆ ಒಳಗಾಗಬಾರದು ಎಂದು ಹೇಳಿದರು.
Comments