ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗುವಂತೆ ಕಾರ್ಯಕರ್ತರಿಗೆ ಸೂಚನೆ

19 Sep 2017 3:24 PM |
2241 Report

ಬೆಂಗಳೂರು, ಸೆಪ್ಟೆಂಬರ್ 19 : ಕಾಂಗ್ರೆಸ್ ನಾಯಕರು ಇನ್ನು ಮುಂದೆ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಲಿದ್ದಾರೆಯೇ?. ಸರ್ಕಾರದ ಸಾಧನೆಗಳನ್ನು ಸುಲಭವಾಗಿ ಜನರಿಗೆ ತಲುಪಿಸಲು ಸಾಮಾಜಿಕ ಜಾಲತಾಣಗಳಲ್ಲಿ ಖಾತೆ ತೆರೆಯುವಂತೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಸೂಚನೆ ನೀಡಿದ್ದಾರೆ.

ಶಾಸಕರು, ಸಂಸದರು, ಸೋತ ಅಭ್ಯರ್ಥಿಗಳು, ಪಕ್ಷದ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ನಿಗಮ-ಮಂಡಳಿಗಳ ಅಧ್ಯಕ್ಷರಿಗೆ ಪರಮೇಶ್ವರ ಅವರು ಈ ಕುರಿತು ಪತ್ರ ಬರೆದಿದ್ದಾರೆ. ಎಲ್ಲರೂ ಸಾಮಾಜಿಕ ಜಾಲತಾಣಗಳಲ್ಲಿ ಖಾತೆ ತೆರೆಯಬೇಕು, ಖಾತೆ ಹೊಂದಿದವರು ಸಕ್ರಿಯರಾಗಬೇಕು ಎಂದು ಪರಮೇಶ್ವರ ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡಿದಾಗ, ಜಾಲತಾಣಗಳಲ್ಲಿ ಅಪಪ್ರಚಾರ ಮಾಡಿದಾಗ ಜಾಲತಾಣಗಳ ಮೂಲಕವೇ ಉತ್ತರ ನೀಡಬೇಕು. ಜಾಲತಾಣಗಳ ಮೂಲಕ ಜನರನ್ನು ಬೇಗ ತಲುಪಬಹುದಾಗಿದೆ. ಆದ್ದರಿಂದ, ಎಲ್ಲರೂ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಬೇಕು ಎಂದು ಪರಮೇಶ್ವರ ನಿರ್ದೇಶನ ನೀಡಿದ್ದಾರೆ.


Edited By

Hema Latha

Reported By

congress admin

Comments