ಮುಂದಿನ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಕುಮಾರಸ್ವಾಮಿ ಮಾಸ್ಟರ್ ಪ್ಲಾನ್ ಏನು ಗೂತ್ತಾ ?

20 Sep 2017 11:35 AM |
3334 Report

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳೊಂದಿಗೆ ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ಕಾಂಗ್ರೆಸ್, ಬಿ.ಜೆ.ಪಿ. ಪೈಪೋಟಿಗೆ ಬಿದ್ದಂತೆ ಕಾರ್ಯತಂತ್ರ ರೂಪಿಸುತ್ತಿವೆ.ಕಾಂಗ್ರೆಸ್ ಮತ್ತು ಬಿ.ಜೆ.ಪಿ.ಗಿಂತ ಹೆಚ್ಚು ಸ್ಥಾನ ಗಳಿಸಲು ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಮಾಸ್ಟರ್ ಪ್ಲಾನ್ ಮಾಡಿದ್ದಾರೆ.

ಇತ್ತೀಚೆಗೆ ರಾಜ್ಯ ರಾಜಕೀಯದಲ್ಲಿ ಉತ್ತರ ಕರ್ನಾಟಕದ ವಿಚಾರ ಹೆಚ್ಚಾಗಿ ಚರ್ಚೆಯಾಗುತ್ತಿದೆ. ಉತ್ತರ ಕರ್ನಾಟಕದ ಮೇಲೆ ಮೂರೂ ಪಕ್ಷಗಳು ಕಣ್ಣಿಟ್ಟಿದ್ದು, ಈ ಭಾಗದಲ್ಲಿ ಹೆಚ್ಚಿನ ಸ್ಥಾನ ಗಳಿಸಲು ಪ್ರಯತ್ನ ನಡೆಸಿವೆ.ಹೆಚ್.ಡಿ. ಕುಮಾರಸ್ವಾಮಿ ಹಿಂದೆಯೇ ಹುಬ್ಬಳ್ಳಿಯಲ್ಲಿ ಮನೆ ಮಾಡಿ ಕಾರ್ಯಾಚರಣೆ ನಡೆಸಿದ್ದಾರೆ. ಈಗ ಉತ್ತರ ಕರ್ನಾಟಕದ ಮತಗಳ ಮೇಲೆ ಕಣ್ಣಿಟ್ಟು ಹೊಸ ಪ್ಲಾನ್ ಮಾಡಿದ್ದಾರೆ.

ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕೈಗೊಂಡಿದ್ದ ಗ್ರಾಮವಾಸ್ತವ್ಯ ಭರ್ಜರಿ ಯಶಸ್ಸು ಕಂಡಿತ್ತು. ಈಗ ಮತ್ತೆ ಗ್ರಾಮ ವಾಸ್ತವ್ಯಕ್ಕೆ ಅವರು ಮುಂದಾಗಿದ್ದಾರೆ.ಉತ್ತರ ಕರ್ನಾಟಕದಲ್ಲಿ ನಿರಂತರವಾಗಿ 50 ದಿನ ಪ್ರಚಾರ ಕೈಗೊಳ್ಳಲಿದ್ದು, ಪ್ರತಿ ದಿನ 20 ಕ್ಕೂ ಅಧಿಕ ಹಳ್ಳಿಗಳಿಗೆ ಭೇಟಿ ನೀಡಲಿದ್ದಾರೆ. ರಾತ್ರಿ ಬಹಿರಂಗ ಸಭೆ ಬಳಿಕ ನಿಗದಿತ ಗ್ರಾಮದಲ್ಲಿ ವಾಸ್ತವ್ಯ ಹೂಡಲಿದ್ದಾರೆ.ಹೆಚ್ಚಿನ ಸ್ಥಾನ ಗಳಿಸುವ ನಿಟ್ಟಿನಲ್ಲಿ ಗ್ರಾಮವಾಸ್ತವ್ಯದ ಮೂಲಕ ಪ್ರಚಾರ ನಡೆಸಲಿದ್ದಾರೆ. ವಿಶೇಷವಾಗಿ ಸಿದ್ಧಪಡಿಸಲಾದ ಕ್ಯಾರವಾನ್ ಬಸ್ ನಲ್ಲಿ ಅವರು ಪಕ್ಷದ ನಾಯಕರೊಂದಿಗೆ ಪ್ರಚಾರ ಕೈಗೊಳ್ಳಲಿದ್ದಾರೆ.

Edited By

Suresh M

Reported By

hdk fans

Comments