ಬಿಜೆಪಿಯ ಮತ್ತೊಂದು ವಿಕೆಟ್ಗೆ ಜೆಡಿಎಸ್ ಗಾಳ

20 Sep 2017 4:58 PM |
12580 Report

ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಜೆಡಿಎಸ್ ಸೇರುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದಲ್ಲಿ ಪಕ್ಷ ಸಂಘಟನೆಗೆ ಮುಂದಾಗಿರುವ ಜೆಡಿಎಸ್ ವಿರೂಪಾಕ್ಷಪ್ಪ ಅವರನ್ನು ಸೆಳೆಯಲು ಪ್ರಯತ್ನ ನಡೆಸಿದೆ. ಪಕ್ಷಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ. ಆದರೆ, ಅವರು ಇನ್ನೂ ಅಂತಿಮ ನಿರ್ಧಾರವನ್ನು ಪ್ರಕಟಿಸಿಲ್ಲ.

ಕೆ.ವಿರೂಪಾಕ್ಷಪ್ಪ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಜೊತೆ ಗುರುತಿಸಿಕೊಂಡಿದ್ದಾರೆ. ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ ರಾಜ್ಯಾಧ್ಯಕ್ಷರಾಗಿದ್ದಾರೆ .ಮಾಜಿ ಸಚಿವ ಎಚ್.ವಿಶ್ವನಾಥ್ ಅವರು ಕೆ.ವಿರೂಪಾಕ್ಷಪ್ಪ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. 2018ರ ಚುನಾವಣೆಯಲ್ಲಿ ಉತ್ತರ ಕರ್ನಾಟಕ ಭಾಗದಿಂದ ಹೆಚ್ಚು ಸ್ಥಾನ ಗೆಲ್ಲಬೇಕು ಎಂಬುದು ಜೆಡಿಎಸ್ ತಂತ್ರವಾಗಿದೆ. ಇದಕ್ಕಾಗಿ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಹುಬ್ಬಳ್ಳಿಯಲ್ಲಿ ಮನೆ ಮಾಡಿದ್ದಾರೆ. ದೇವೇಗೌಡರು ಸಹ ಉತ್ತರ ಕರ್ನಾಟಕದಲ್ಲಿ ಪಕ್ಷ ಸಂಘಟನೆ ಮಾಡಲು ಸೂಚನೆ ನೀಡಿದ್ದಾರೆ. ಆದ್ದರಿಂದ, ಕೆ.ವಿರೂಪಾಕ್ಷಪ್ಪ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಜೆಡಿಎಸ್ ಮುಂದಾಗಿದೆ.

Edited By

jds admin

Reported By

jds admin

Comments