ಕುಮಾರಣ್ಣ ಹೃದಯ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ, 15 ದಿನಗಳ ವಿಶ್ರಾಂತಿ ಬಳಿಕ ಮತ್ತೆ ಸಂಘಟನೆ ಶುರು
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಎಚ್ ಡಿ ಕುಮಾರಸ್ವಾಮಿ ಅವರ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಹೃದಯದ ಶಸ್ತ್ರಚಿಕಿತ್ಸೆಗಾಗಿ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದರು. ಹತ್ತು ವರ್ಷಗಳ ಹಿಂದೆ ಅಳವಡಿಸಿದ್ದ ಟಿಶ್ಯುವಾಲ್ವ್ ರಿಪ್ಲೇಸ್ ಮಾಡಲಾಗಿದ್ದು, 45 ನಿಮಿಷಗಳ ಕಾಲ ನಡೆದ ಹಾರ್ಟ್ ಆಪರೇಷನ್ ಯಶಸ್ವಿಯಾಗಿದೆ…..
ಆಪರೇಷನ್ ಬಳಿಕ ವೈದ್ಯರ ನಿಗಾದಲ್ಲಿರುವ ಕುಮಾರಸ್ವಾಮಿ ಅವರಿಗೆ ಶಸ್ತ್ರ ಚಿಕಿತ್ಸೆ ನಂತರದ ಪ್ರಕ್ರಿಯೆ ನಡೆಯುತ್ತಿದೆ. ಚಿಕಿತ್ಸೆ ಬಳಿಕ ಚೇತರಿಸಿಕೊಳ್ಳಲು ಕನಿಷ್ಟ ಮೂರುಗಂಟೆ ಬೇಕಾಗಿದ್ದು, 12 ಗಂಟೆ ವೇಳೆಗೆ ಕುಮಾರಸ್ವಾಮಿ ಆರೋಗ್ಯ ಸಹಜ ಸ್ಥಿತಿಗೆ ಬರುವ ಸಾಧ್ಯತೆ ಇದೆ
Comments