ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ , ಇನ್ನೆರಡು ದಿನದಲ್ಲಿ ವಾರ್ಡ್ ಗೆ ಶಿಫ್ಟ್
ಕುಮಾರ ಸ್ವಾಮಿ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ನಿನ್ನೆಗಿಂತ ಆರೋಗ್ಯದಲ್ಲಿ ಸುಧಾರಿಸಿದೆ. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಭಯ ಪಡುವ ಅಗತ್ಯವಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹೇಳಿದ್ದಾರೆ….
ಹೃದಯ ಶಸ್ತ್ರ ಚಿಕಿತ್ಸೆ ಆಗಿರುವುದರಿಂದ ಇನ್ನು ಒಂದೆರಡು ದಿನ ಐಸಿಯುನಲ್ಲಿರಲಿ ಎಂದು ವೈದ್ಯರು ಸಲಹೆ ನೀಡಿದ್ದಾರೆ. ಹೀಗಾಗಿ ಇನ್ನೂ ಐಸಿಯುನಲ್ಲಿದ್ದಾರೆ. ಶೀಘ್ರ ಚೇತರಿಸಿಕೊಳ್ಳಲಿದ್ದಾರೆ ಎಂದರು.ಬನ್ನೇರುಘಟ್ಟದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪುತ್ರ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈದ್ಯರು ವಿಶ್ರಾಂತಿ ತೆಗೆದುಕೊಳ್ಳಲು ಹೇಳಿದ್ದಾರೆ. ವಿಶ್ರಾಂತಿ ತೆಗೆದುಕೊಂಡರೆ ಎಲ್ಲವೂ ಸರಿಯಾಗಲಿದೆ ಎಂದರು .
Comments