ಎಚ್ ಡಿಕೆ ಆರೋಗ್ಯದ ಬಗ್ಗೆ ಅನಿತಾ ಕುಮಾರಸ್ವಾಮಿ ಹೇಳಿದ್ದೇನು?
ಬೆಂಗಳೂರು: ಹೃದಯದ ಕವಾಟ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಎಚ್.ಡಿ.ಕುಮಾರಸ್ವಾಮಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅವರ ಪತ್ನಿ ಅನಿತಾ ಕುಮಾರಸ್ವಾಮಿ ತಿಳಿಸಿದ್ದಾರೆ.
‘ಕುಮಾರಸ್ವಾಮಿ ಭಾನುವಾರ ಬೆಳಿಗ್ಗೆ ಉಪಾಹಾರ ಸೇವಿಸಿ, ಕಾಫಿ ಕುಡಿದಿದ್ದಾರೆ. ಏಳು ದಿನಗಳಲ್ಲಿ ಸಂಪೂರ್ಣ ಚೇತರಿಸಿಕೊಳ್ಳಲಿದ್ದಾರೆ’ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
‘ಮುಂದಿನ 15 ದಿನಗಳವರೆಗೆ ಅವರು ಯಾರನ್ನೂ ಭೇಟಿ ಮಾಡುವುದಿಲ್ಲ. ಸಂಪೂರ್ಣ ವಿಶ್ರಾಂತಿಯಲ್ಲಿ ಇರುತ್ತಾರೆ’ ಎಂದೂ ಅನಿತಾ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.
Comments