ಬಿ.ಎಸ್‌.ಯಡಿಯೂರಪ್ಪ ಸ್ಪರ್ಧಿಸುವ ವಿಧಾನಸಭಾ ಕ್ಷೇತ್ರ ಫಿಕ್ಸ್ ,ಯಾವುದು ಗೊತ್ತಾ ??

26 Sep 2017 12:46 PM |
3850 Report

ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್‌.ಯಡಿಯೂರಪ್ಪ ಅವರು ಕೊನೆಗೂ ತಾವು ಸ್ಪರ್ಧಿಸುವ ಉತ್ತರ ಕರ್ನಾಟಕ ಭಾಗದ ವಿಧಾನಸಭಾ ಕ್ಷೇತ್ರವನ್ನು ಅಂತಿಮಗೊಳಿಸಿದ್ದು , ಸಚಿವೆ ಉಮಾಶ್ರೀ ಅವರ ವಿರುದ್ಧ ಸ್ಪರ್ಧೆಗೆ ಮುಂದಾಗಿದ್ದಾರೆ….

 

ಬಾಗಲಕೋಟೆ ಜಿಲ್ಲೆಯ ತೇರದಾಳ ಕ್ಷೇತ್ರದಿಂದ ಯಡಿಯೂರಪ್ಪ ಅವರು ಸ್ಪರ್ಧಿಸುವುದು ಅಂತಿಮವಾಗಿದ್ದು, ಕ್ಷೇತ್ರದ ಅಭ್ಯರ್ಥಿ ಎಂದು ಬಿಂಬಿತವಾಗಿದ್ದ ಮಾಜಿ ಶಾಸಕ ಸಿದ್ದು ಸವದಿ ಅವರಿಗೆ ವಿಧಾನ ಪರಿಷತ್‌ ಸ್ಥಾನ ನೀಡುವ ಭರವಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ. 

ಕ್ಷೇತ್ರದಲ್ಲಿ ಲಿಂಗಾಯತ ಮತ್ತು ನೇಕಾರ ಸಮುದಾಯದ ಮತಗಳು ನಿರ್ಣಾಯಕವಾಗಿದ್ದು, ಲಿಂಗಾಯತ ಸಮುದಾಯದ ಪ್ರಬಲ ನಾಯಕ ಯಡಿಯೂರಪ್ಪ ಮತ್ತು ನೇಕಾರ ಸಮುದಾಯದ ನಾಯಕಿ, ನಟಿ ಉಮಾಶ್ರೀ ಅವರ ನಡುವೆ ಪ್ರಬಲ ಸ್ಪರ್ಧೆ ನಿರೀಕ್ಷಿಸಬಹುದಾಗಿದೆ. 

Edited By

Shruthi G

Reported By

Admin bjp

Comments