ಎಚ್.ಡಿ.ಕುಮಾರಸ್ವಾಮಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್

26 Sep 2017 5:13 PM |
1239 Report

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಂಪೂರ್ಣ ಚೇತರಿಸಿಕೊಂಡಿದ್ದು, ಇಂದು ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಬಹುದು ಎಂದು ಹೃದ್ರೋಗ ತಜ್ಞ ಡಾ.ಸತ್ಯಕಿ ನಂಬಾಲ ತಿಳಿಸಿದರು...

ಕೇವಲ ಅಬ್ಸರ್ವೇಷನ್‍ಗಾಗಿ ಐಸಿಯುನಲ್ಲಿಡಲಾಗಿದ್ದು,ದ್ರವರೂಪದ ಆಹಾರ ನೀಡಲಾಗುತ್ತಿದೆ. ಸೋಂಕು ತಗುಲಬಾರದೆಂಬ ಕಾರಣಕ್ಕಾಗಿ ಆಸ್ಪತ್ರೆಯಲ್ಲೇ ಇರಿಸಿಕೊಳ್ಳಲಾಗಿದೆ ಎಂದು ಹೇಳಿದರು. ಕಳೆದ ನಾಲ್ಕು ದಿನಗಳ ಹಿಂದೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಎಚ್.ಡಿ.ಕುಮಾರಸ್ವಾಮಿಯವರು ಹೃದಯ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದರು.

Edited By

hdk fans

Reported By

hdk fans

Comments