ನಗರದ ಎಲ್ಲಾ ರಸ್ತೆ ವೈಟ್ ಟಾಪಿಂಗ್: ಮುಖ್ಯಮಂತ್ರಿ ಸಿದ್ದರಾಮಯ್ಯ

27 Sep 2017 1:00 PM |
2248 Report

ಬೆಂಗಳೂರು: ಮುಂದಿನ 5 ವರ್ಷಗಳಲ್ಲಿ ನಗರದ ಎಲ್ಲಾ ರಸ್ತೆಗಳನ್ನು ವೈಟ್ ಟಾಪಿಂಗ್ ರಸ್ತೆಗಳನ್ನಾಗಿ ಪರಿವರ್ತಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಭರವಸೆ ನೀಡಿದ್ದಾರೆ.

ಮಹಾಲಕ್ಷ್ಮಿ ಬಡಾವಣೆ ವಿಧಾನಸಭಾ ಕ್ಷೇತ್ರ ಹಾಗೂ ಶಂಕರಮಠ ವಾರ್ಡಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಂಗಳವಾರ ಚಾಲನೆ ನೀಡಿ ಮಾತನಾಡಿರುವ ಅವರು, ನಗರದ ಕೇಂದ್ರ ಭಾಗದಲ್ಲಿರುವ ವಿವಿಧ ರಸ್ತೆಗಳನ್ನು ವೈಟ್ ಟಾಪಿಂಗ್ ಮಾಡುವುದಕ್ಕಾಗಿ ಈಗಾಗಲೇ ರೂ 1 ಸಾವಿರ ಕೋಟಿ ಬಿಡುಗಡೆ ಮಾಡಲಾಗಿದೆ. ಅದೇ ರೀತಿ ಮುಂದಿನ ಅಧಿಕಾರ ಅವಧಿಯಲ್ಲಿ ನಗರ ಎಲ್ಲಾ ರಸ್ತೆಗಳ್ನು ವೈಟ್ ಟಾಪಿಂಗ್ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

Edited By

Hema Latha

Reported By

congress admin

Comments