ಜನವರಿಯೊಳಗೆ ಜೆಡಿಎಸ್ ಅಭ್ಯರ್ಥಿಗಳು ಫೈನಲ್
ರಾಮನಗರ ಕ್ಷೇತ್ರದೊಂದಿಗೆ ನಮ್ಮ ಕುಟುಂಬ ಭಾವನಾತ್ಮಕ ಸಂಬಂಧ ಹೊಂದಿದೆ. ಹೀಗಾಗಿ ವಿಧಾನಸಭಾ ಚುನಾವಣೆಯಲ್ಲಿ ಕುಮಾರ ಸ್ವಾಮಿ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕೆಂಬ ಕುರಿತು ಯೋಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಹೇಳಿದರು.
ಮಾಧ್ಯಮ ಪ್ರತಿನಿಧಿ ಗಳೊಂದಿಗೆ ಮಾತನಾಡಿದ ಅವರು, ತಾವು ಈ ಹಿಂದೆ ಮುಖ್ಯಮಂತ್ರಿಯಾಗಿದ್ದು ರಾಮನಗರದಿಂದ. ತಮ್ಮ ಕುಟುಂಬದ ಅನೇಕರು ಇಲ್ಲಿಂದ ಸ್ಪರ್ಧಿಸಿ, ಗೆದ್ದಿದ್ದಾರೆ. ಹೀಗಾಗಿ ಕ್ಷೇತ್ರದೊಂದಿಗೆ ಇರುವ ಭಾವನಾತ್ಮಕ ಸಂಬಂಧದಿಂದಾಗಿ ಕುಮಾರ ಸ್ವಾಮಿಯವರು ಇದೇ ಕ್ಷೇತ್ರದಿಂದ ಸ್ಪರ್ಧಿಸಬೇಕೋ ಅಥವಾ ಬೇರೆ ಕ್ಷೇತ್ರದಿಂದ ಕಣಕ್ಕಿಳಿಯ ಬೇಕೋ ಎಂಬ ಬಗ್ಗೆ ಇನ್ನೂ ತೀರ್ಮಾನ ಕೈಗೊಂಡಿಲ್ಲ ಎಂದರು. ಪಕ್ಷವನ್ನು ಬೂತ್ ಮಟ್ಟದಿಂದ ಬಲಗೊಳಿಸುವ ಉದ್ದೇಶದಿಂದ ರಾಜ್ಯದೆಲ್ಲೆಡೆ ಪ್ರವಾಸ ನಡೆಸಲಾಗುವುದು ಹಾಗೂ ಜನವರಿ ಅಂತ್ಯಕ್ಕೆ ಎಲ್ಲ ಕ್ಷೇತ್ರಗಳಲ್ಲಿ ಸಂಚರಿಸಲಾಗುವುದು. ಜನವರಿಯೊಳಗೆ ಪಕ್ಷದಿಂದ ಸ್ಪರ್ಧಿಸುವ ಎಲ್ಲ ಕ್ಷೇತ್ರದ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುವುದು ಎಂದು ತಿಳಿಸಿದರು
Comments