ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಎಚ್ ಡಿಕೆ ವಾಗ್ದಾಳಿ!
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿ ರಾಜಕಾರಣ ಮತ್ತು ಸುಳ್ಳು ಪ್ರಚಾರದ ಮೂಲಕ ಚುನಾವಣೆ ಗೆಲ್ಲಬಹುದು ಎಂಬ ಭ್ರಮೆಯಲ್ಲಿದ್ದಾರೆ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ಮಾಡಿದ್ದಾರೆ.
ಇತ್ತೀಚೆಗೆ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿ ಚೇತರಿಸಿಕೊಳ್ಳುತ್ತಿರುವ ಕುಮಾರಸ್ವಾಮಿ ಭಾನುವಾರ ಅಪೊಲೋ ಆಸ್ಪತ್ರೆಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ‘ಜನ ತಮ್ಮ ಆಡಳಿತದಿಂದ ಸಂತೃಪ್ತರಾಗಿದ್ದಾರೆ ಎಂದು ಸಿದ್ದರಾಮಯ್ಯ ಭಾವಿಸಿದ್ದಾರೆ. ಅದು ನಿಜವಲ್ಲ’ ಎಂದರು.
ನಿಮ್ಮ ಪ್ರೀತಿ, ಅಭಿಮಾನ ನಿಮ್ಮ ಹೃದಯದಲ್ಲಿರಲಿ, ನನ್ನ ಆರೋಗ್ಯ ಹಂತ ಹಂತವಾಗಿ ಚೇತರಿಕೆ ಕಾಣುತ್ತಿದೆ. ನನಗೆ ಒಂದು ತಿಂಗಳ ಕಾಲ ವಿಶ್ರಾಂತಿ ಕೊಡುವಿರಾ?" ಎಂದು ಮಾಜಿ ಸಿಎಂ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.
Comments