ಜಮೀರ್ ಅಹ್ಮದ್ ವಿರುಧ ಸ್ಪರ್ಧಿಸಲು ಬಿಜೆಪಿ ಕ್ಯಾಂಡಿಡೇಟ್ ಫಿಕ್ಸ್

03 Oct 2017 4:35 PM |
4999 Report

2018ರ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕ ಬಿಜೆಪಿ ಹೊಸ ಮುಖಗಳಿಗೆ ಆದ್ಯತೆ ನೀಡಲು ಮುಂದಾಗಿದೆ ಇದರ ಭಾಗವಾಗಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ.....

ಲಹರಿ ವೇಲು ಅವರನ್ನು ಕಣಕ್ಕಿಳಿಸುವ ಬಗ್ಗೆ ಚಿಂತನೆ ನಡೆದಿದೆ. ಬೆಂಗಳೂರಿನ ಚಾಮರಾಜಪೇಟೆ ಕ್ಷೇತ್ರದ ಶಾಸಕರು ಜೆಡಿಎಸ್‌ನ ಜಮೀರ್ ಅಹಮದ್ ಖಾನ್. ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿ ಪಕ್ಷದಿಂದ ಉಚ್ಚಾಟನೆಗೊಂಡಿರುವ ಜಮೀರ್, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಸಿದ್ಧತೆ ಆರಂಭಿಸಿದ್ದಾರೆ.ಲಹರಿ ವೇಲು ಎಂದೇ ಖ್ಯಾತರಾಗಿರುವ ಲಹರಿ ಆಡಿಯೋ ಸಂಸ್ಥೆಯ ಮಾಲೀಕರಾದ ವೇಲು ಆಗಸ್ಟ್ 28ರಂದು ಬಿ.ಎಸ್.ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ ಸೇರಿದ್ದಾರೆ. ಚಾಮರಾಜಪೇಟೆಯಲ್ಲಿ ಚಿರಪರಿಚಿತರಾಗಿರುವ ಲಹರಿ ವೇಲು ಅವರನ್ನು ಜಮೀರ್ ಅಹಮದ್ ಖಾನ್ ಎದುರು ಚುನಾವಣೆಗೆ ನಿಲ್ಲಿಸುವ ಬಗ್ಗೆ ಬಿಜೆಪಿ ವಯಲದಲ್ಲಿ ಚಿಂತನೆ ನಡೆದಿದೆ.
ಜಮೀರ್ ಅಹಮದ್ ಖಾನ್ ವಿರುದ್ಧ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಜೆಡಿಎಸ್ ತಂತ್ರ ರೂಪಿಸಿದೆ. ಇಬ್ಬರು ಮುಸ್ಲಿಂ ಅಭ್ಯರ್ಥಿಗಳ ನಡುವೆ ಲಹರಿ ವೇಲು ಅವರನ್ನು ಕಣಕ್ಕಿಳಿಸಿದರೆ, ಮತ ವಿಭಜನೆಯಾಗಿ ಜಯಗಳಿಸಬಹುದು ಎಂಬುದು ಬಿಜೆಪಿಯ ಲೆಕ್ಕಾಚಾರವಾಗಿದೆ.

Edited By

Suresh M

Reported By

Admin bjp

Comments