HDK ಈಸ್ ಬ್ಯಾಕ್, ರಾಜ್ಯ ಪ್ರವಾಸ ಕನ್ನಡ ರಾಜ್ಯೋತ್ಸವ ದಿನದಂದು ಶುರು "113 ಪ್ಲಸ್ ಟಾರ್ಗೆಟ್ “

ಮುಂಬರಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಸಲುವಾಗಿ ಕನ್ನಡ ರಾಜ್ಯೋತ್ಸವ ದಿನದಂದು ರಾಜ್ಯ ಪ್ರವಾಸ ಆರಂಭಿಸುತ್ತೇನೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಪ್ರಕಟಿಸಿದ್ದಾರೆ ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಜೆಡಿಎಸ್ ಸಭೆಯನ್ನುದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ಅವರು,...
ನಿಮ್ಮೆಲ್ಲರ ಆಶಿರ್ವಾದದಿಂದ ನಾನು ಚೇತರಿಸಿಕೊಳ್ತಿದ್ದೇನೆ. ಆದಷ್ಟು ಬೇಗ ಚೇತರಿಸಿಕೊಂಡು ನಿಮ್ಮ ಜೊತೆ ಪಕ್ಷ ಸಂಘಟನೆಯಲ್ಲಿ ಭಾಗವಹಿಸುತ್ತೇನೆ . ಕುಮಾರಸ್ವಾಮಿ ಪಕ್ಷದ ಶಾಸಕರಿಗೆ "113 ಪ್ಲಸ್ ಟಾರ್ಗೆಟ್' ನೀಡಿದ್ದಾರೆ. ಜೆಪಿ ನಗರ ನಿವಾಸದಿಂದಲೇ ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಥವಾ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡು ಅಧಿಕಾರ ಹಿಡಿಯುವ ಯೋಚನೆ ಬಿಟ್ಟು ಸ್ವಂತ ಶಕ್ತಿಯ ಮೇಲೆ ಸರ್ಕಾರ ರಚಿಸುವ ಸಂಕಲ್ಪ ತೊಡಿ ಎಂದು ಹೇಳಿದರು. ಸಮೀಕ್ಷೆಗಳ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ. ರಾಜ್ಯದ ಜನರ ನಾಡಿ ಮಿಡಿತ ನನಗೆ ಗೊತ್ತಿದೆ, ನೀವು ಬೂತ್ ಮಟ್ಟದಲ್ಲಿ ಪಕ್ಷ ಗಟ್ಟಿಗೊಳಿಸಿ. ಪ್ರತಿ ಬೂತ್‌ನಲ್ಲೂ ಸಕ್ರಿಯ ಕಾರ್ಯಕರ್ತರ ಪಡೆ ರಚಿಸಿ ಎಂದು ತಿಳಿಸಿದರು.
ಸಭೆಯಲ್ಲಿ ನಾಡಿನ ಜನತೆಯ ಕಾಳಜಿಯ ಬಗ್ಗೆ ಚರ್ಚೆ ಆಗಬೇಕಿದೆ. ಇಸ್ರೇಲ್ ಪ್ರವಾಸದ ಸಂದರ್ಭದಲ್ಲಿ ಆರೋಗ್ಯ ಕೆಟ್ಟಿತ್ತು, ಆದರೂ ಕೂಡಾ ರೈತರ ಅನುಕೂಲದ ದೃಷ್ಟಿಯಿಂದ ಪ್ರವಾಸ ಮುಗಿಸಿ ಹಲವಾರು ವಿಷಯಗಳನ್ನು ಅಧ್ಯಯನ ಮಾಡಿದೆ. ನವೆಂಬರ್ ಒಂದರ ವೇಳೆಗೆ ನಾನು ಪೂರ್ಣ ಪ್ರಮಾಣದಲ್ಲಿ ಸುಧಾರಿಸಿಕೊಂಡು ನಿಮ್ಮ ಜೊತೆ ಸೇರಿಕೊಳ್ಳುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Comments