ಸಿಎಂ ಸಿದ್ದರಾಮಯ್ಯನನ್ನು ಸೋಲಿಸಲು ದೇವೇಗೌಡರಿಂದ ಮತ್ತೊಂದು ಹೊಸ ಮಾಸ್ಟರ್ ಪ್ಲಾನ್ !

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದರೆ, ಅವರ ಪ್ರಬಲ ಎದುರಾಳಿಯಾಗಿ ಜೆಡಿಎಸ್ ಪಕ್ಷದ ಜಿ.ಟಿ.ದೇವೇಗೌಡ ಕಣಕ್ಕಿಳಿಯಲಿದ್ದಾರೆ.....
ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ, ಮಾಜಿ ಸಂಸದ ಎಚ್.ವಿಶ್ವನಾಥ್, ಬಿಜೆಪಿ ಮುಖಂಡ ಶ್ರೀನಿವಾಸ್ ಪ್ರಸಾದ್ ನಿವಾಸಕ್ಕೆ ತೆರಳಿ ಸಿಎಂ ಸಿದ್ದರಾಮಯ್ಯರನ್ನು ಸೋಲಿಸುವ ಬಗ್ಗೆ ರಣತಂತ್ರ ರೂಪಿಸಿದ್ದಾರೆ ಎನ್ನಲಾಗಿದೆ. ಮುಂಬರುವ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಯಾವ ರೀತಿ ಪ್ರಚಾರ ಕೈಗೊಳ್ಳಬೇಕು ಎನ್ನುವ ಬಗ್ಗೆ ದೇವೇಗೌಡರು, ಜೆಡಿಎಸ್ ನಾಯಕರೊಂದಿಗೆ ಚರ್ಚೆ ನಡೆಸಿದರು ಎಂದು ಜೆಡಿಎಸ್ ಮುಖಂಡರು ತಿಳಿಸಿದರು.
ಚಾಮುಂಡೇಶ್ವರಿ ಕ್ಷೇತ್ರ ಪ್ರತಿನಿಧಿಸುವ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ, ಕಾಂಗ್ರೆಸ್ ತೊರೆದು ಆ ಪಕ್ಷ ಸೇರಿರುವ ಮಾಜಿ ಸಂಸದ ಅಡಗೂರು ಎಚ್.ವಿಶ್ವನಾಥ್, ಕಾಂಗ್ರೆಸ್‌ನಿಂದ ಹೊರಹೋಗಿ ಬಿಜೆಪಿ ಸೇರಿರುವ ಮಾಜಿ ಸಚಿವ ವಿ.ಶ್ರೀನಿವಾಸ ಪ್ರಸಾದ್ ಒಟ್ಟಾಗಿ ಸಿದ್ದರಾಮಯ್ಯ ಅವರನ್ನು ಸೋಲಿಸುವುದಾಗಿ ತೊಡೆತಟ್ಟಿದ್ದಾರೆ.ಪಕ್ಷ ಯಾವುದೇ ಇರಲಿ ಮುಂದಿನ ಚುನಾವಣೆಯಲ್ಲಿ ಮುಖ್ಯಮಂತ್ರಿಯನ್ನು ಸೋಲಿಸುವುದೇ ನಮ್ಮ ಗುರಿ ಎಂದು ಬಹಿರಂಗವಾಗಿ ಹೇಳುತ್ತಿದ್ದಾರೆ.
Comments