ಎಚ್.ಡಿ.ಕೆ ಕಿಂಗ್ ಮೇಕರ್ ಮತ್ತು CM ಆಗೋದು ಕನ್ಫರ್ಮ್: ಬ್ರಹ್ಮಾಂಡ ಗುರೂಜಿ ಭವಿಷ್ಯ

ಪ್ರಧಾನಿ ನರೇಂದ್ರ ಮೋದಿಗೆ ಗಂಡಾಂತರ ಕಾದಿದೆ. ದೇವರ ಮೊರೆಯಿಂದ ಪರಿಹಾರ ಕಂಡುಕೊಳ್ಳದೇ ಹೋದ್ರೆ ಮೃತ್ಯು ಕೂಡ ಎದುರಾಗಬಹುದು ಎಂದು ಹಾಸನದಲ್ಲಿ ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ ಭವಿಷ್ಯ ನುಡಿದಿದ್ದಾರೆ…..
ಮೋದಿ ಅವರದ್ದು ವೃಶ್ಚಿಕ ರಾಶಿ. ಅದರಲ್ಲಿನ ದೋಷ ಇದಕ್ಕೆ ಕಾರಣ ಎಂದಿದ್ದಾರೆ. ರಾಜ್ಯದಲ್ಲಿ ಮುಂದಿನ ಚುನಾವಣೆಯಲ್ಲಿ ಮಾಜಿ ಸಿಎಂ ಹೆಚ್‍ಡಿಕೆ ಕಿಂಗ್ ಮೇಕರ್ ಆಗಲಿದ್ದಾರೆ. ಅವರ ಮೇಲೆ ಉತ್ತರ ಕರ್ನಾಟಕ ಜನ ನಂಬಿಕೆ ಇಟ್ಟಿದ್ದಾರೆ. ಆದರೆ ಅವರು ತಂದೆ ಮಾತು ಕೇಳಬೇಕು. ಆರೋಗ್ಯ ಕಾಪಾಡಿಕೊಳ್ಳಬೇಕು. ಮತ್ತೊಮ್ಮೆ ಸಿಎಂ ಆಗೋ ಯೋಗ ಅವರಿಗಿದೆ. ಸಿಎಂ ಸಿದ್ದರಾಮಯ್ಯ ಈವರೆಗೆ ಮಾಡಿರುವ ತಪ್ಪು ಸರಿಪಡಿಸಿಕೊಳ್ಳಬೇಕು. ಅವರ ಸುತ್ತಮುತ್ತ ಕೆಲವು ಕಚಡಾ ಮಂತ್ರಿಗಳಿದ್ದಾರೆ ಎಂದರು.
Comments