ನಾಡಪ್ರಭು ಕೆಂಪೇಗೌಡರ ಸೊಸೆ ಲಕ್ಷ್ಮೀ ದೇವಿ ರವರ ಪ್ರತಿಮೆಯನ್ನು ಅನಾವರಣಗೊಳಿಸಿದ ಡಿ.ಕೆ.ಶಿವಕುಮಾರ್

ಬೇಲಿಮಠದ ಚರಮೂರ್ತಿ ಶಿವರುದ್ರ ಸ್ವಾಮೀಜಿ, ಸ್ಪಟಿಕಪುರಿ ಮಹಾಸಂಸ್ಥಾನದ ನಂಜಾವಧೂತ ಸ್ವಾಮೀಜಿ, ಆದಿಚುಂಚನಗಿರಿಯ ವಿಜಯನಗರ ಶಾಖಾ ಮಠದ ಸೌಮ್ಯನಾಥ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ಬಿಬಿಎಂಪಿಯ ಕೇಂದ್ರ ಕಚೇರಿ ಮುಂಭಾಗದಲ್ಲಿ ಪ್ರತಿಷ್ಠಾಪಿಸಲಾಗಿರುವ ನಾಡಪ್ರಭು ಕೆಂಪೇಗೌಡರ ಸೊಸೆ ಮಹಾತ್ಯಾಗಿ ಲಕ್ಷ್ಮೇದೇವಿ ಅವರ ಕಂಚಿನ ಪ್ರತಿಮೆಯನ್ನು ಸಚಿವ ಡಿ.ಕೆ.ಶಿವಕುಮಾರ್ ಅವರು ಅನಾವರಣಗೊಳಿಸಿದರು.
ಅಧಿಕಾರದ ಲಾಲಾಸೆಯಿಂದ ರಾಜಕಾರಣಿಗಳು ಒಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡಲು ಹಿಂದೆ ಮುಂದೆ ನೋಡುತ್ತಾರೆ. ಆದರೆ, ಬೆಂಗಳೂರು ನಿರ್ಮಾಣಕ್ಕಾಗಿ ಲಕ್ಷ್ಮೇದೇವಿ ಅವರು ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದರು,'' ಎಂದು ಸ್ಮರಿಸಿದರು. ಕೆಂಪೇಗೌಡರು ಕಟ್ಟಿದ ಬೆಂಗಳೂರು ಈ ದೇಶದ ಆಸ್ತಿ. ಇಲ್ಲಿಂದ ಶೇ 39ರಷ್ಟು ಆದಾಯ ದೇಶದ ಬೊಕ್ಕಸಕ್ಕೆ ಹೋಗುತ್ತಿದೆ. ಆದ ಕಾರಣ, ಪುರ ಪಿತೃಗಳು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು. ಪೂಜ್ಯ ಮಹಾಪೌರರಾದ ಜಿ.ಪದ್ಮಾವತಿ ಅವರು ತಮ್ಮ ಸಿಕ್ಕ ಒಂದು ವರ್ಷದ ಅವಧಿಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ. ದಾಖಲೆ ಮಳೆಯಿಂದ ತತ್ತರಿಸಿದ್ದ ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ,'' ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಸಚಿವ ಕೆ.ಜೆ.ಜಾರ್ಜ್ ವಿಧಾನ ಪರಿಷತ್ ಸದಸ್ಯ ರಾಮಚಂದ್ರಗೌಡ, ಉಪಮೇಯರ್ ಎಂ.ಆನಂದ್, ಆಡಳಿತ ಪಕ್ಷದ ನಾಯಕ ಮಹಮ್ಮದ್ ರಿಜ್ವಾನ್ ನವಾಬ್, ಪ್ರತಿಪಕ್ಷ ನಾಯಕ ಪದ್ಮನಾಭರೆಡ್ಡಿ, ಆಯುಕ್ತ ಎನ್.ಮಂಜುನಾಥ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.
Comments