ಚಾಮುಂಡೇಶ್ವರಿ ಮತ್ತು ಹುಣಸೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗಳ ಹೆಸರು ಫೈನಲ್!

ಬೆಂಗಳೂರು : ಇನ್ನೇನು 2018ರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜಕೀಯ ಪಕ್ಷಗಳಲ್ಲಿ ಟಿಕೆಟ್ ಗಾಗಿ ಪೈಪೋಟಿ ಶುರುವಾಗಿದೆ.ಹುಣಸೂರು ಮತ್ತು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸ್ಪರ್ಧಿಸುವ ಜೆಡಿಎಸ್ ಅಭ್ಯರ್ಥಿಗಳ ಹೆಸರು ಅಂತಿಮವಾಗಿದೆ. ಹುಣಸೂರು ವಿಧಾನಸಭಾ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದ ಎಚ್.ಡಿ.ದೇವೇಗೌಡ ಅವರ ಮೊಮ್ಮಗ ಪ್ರಜ್ವಲ್ ರೇವಣ್ಣಗೆ ನಿರಾಸೆಯಾಗಿದೆ.
ಮಂಗಳವಾರ ಸುದ್ದಗೋಷ್ಠಿ ಯೊಂದಿಗೆ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ, ಚಾಮುಂಡೇಶ್ವರಿ ಕ್ಷೇತ್ರದಿಂದ ಜಿ.ಟಿ.ದೇವೇಗೌಡ ಕಣಕ್ಕಿಳಿಯಲಿದ್ದು, ಹುಣಸೂರು ಕ್ಷೇತ್ರದಿಂದ ಎಚ್.ವಿಶ್ವನಾಥ್ ಸ್ಪರ್ಧಿಸಲಿದ್ದಾರೆ ಎಂದು ತಿಳಿಸಿದರು.ಹುಣಸೂರು ಕ್ಷೇತ್ರದಿಂದ ಬೇರೆಯವರಿಗೆ ಟಿಕೆಟ್ ನೀಡಲಾಗುತ್ತಿದೆ ಎನ್ನುವ ವದಂತಿಗಳಲ್ಲಿ ಸತ್ಯಾಂಶವಿಲ್ಲ. ಹಿರಿಯ ಮುಖಂಡರಾದ ವಿಶ್ವನಾಥ್ ಸ್ಪರ್ಧೆಯಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಎಚ್ ಡಿಕೆ ಸ್ಪಷ್ಟನೆ ನೀಡಿದರು.ಕುಮಾರಸ್ವಾಮಿ ಅವರ ಪುತ್ರ ನಿಖಿಲ್, ಚುನಾವಣೆಗೆ ನೇರವಾಗಿ ಸ್ಪರ್ಧಿಸದಿದ್ದರೂ, ಪ್ರಮುಖವಾಗಿ ಅಪ್ಪನ ಜತೆಗೆ ರಾಜ್ಯಾದ್ಯಂತ ಪ್ರಚಾರಕ್ಕಿಳಿಯಲಿದ್ದಾರೆ.
Comments