ಎಚ್.ಡಿ.ಕೆ ರಾಜ್ಯ ಚುನಾವಣೆ ಪ್ರಚಾರ ಆರಂಭಕ್ಕೆ ಕ್ಷೇತ್ರ ಫಿಕ್ಸ್
ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸ್ವಕ್ಷೇತ್ರ ಚಾಮುಂಡೇಶ್ವರಿ ಕ್ಷೇತ್ರದಿಂದಲೇ ವಿಧಾನಸಭೆ ಚುನಾವಣೆ ಪ್ರಚಾರ ಆರಂಭಿಸಲಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ಜೆಪಿ ನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ನನ್ನ ಶತ್ರುಗಳೆಲ್ಲ ಒಂದಾದರೂ ನನ್ನ ಸೋಲಿಸಲು ಆಗದು ಎಂದು ಸವಾಲು ಹಾಕಿ ಗೆದ್ದೇ ಬಿಟ್ಟೆ ಎಂಬ ಭ್ರಮೆಯಲ್ಲಿದ್ದಾರೆ. ಆಲ್ ಡೇಸ್ ನಾಟ್ ಸಂಡೇ ಎಂಬುದನ್ನು ಅರ್ಥಮಾಡಿಕೊಳ್ಳಲಿ ಎಂದರು.
ಸಿದ್ದರಾಮಯ್ಯ ಕ್ಷೇತ್ರದ ಉಪ ಚುನಾವಣೆ ಹೇಗೆ ನಡೆಸಿದರು ಎಂಬುದು ಗೊತ್ತಿದೆ. ಅಷ್ಟು ಹಣ ಸುರಿದು ಎಷ್ಟು ಮತಗಳ ಅಂತರದಿಂದ ಗೆದ್ದರು ಎಂಬುದೂ ಗೊತ್ತಿದೆ. ಆ್ಯಂಬುಲೆನ್ಸ್ ಹಾಗೂ ಪೊಲೀಸ್ ವಾಹನಗಳಲ್ಲಿ ಹಣ ಸಾಗಿಸಿ ಮತದಾರರಿಗೆ ಹಂಚುವುದನ್ನು ಸಿದ್ದರಾಮಯ್ಯ ಬಿಜೆಪಿಯವರ ಬಳಿ ಕಲಿತುಕೊಂಡಿದ್ದಾರೆ. ಈ ಬಾರಿಯೂ ಗೆಲ್ಲಬಹುದು ಎಂದು ಕೊಂಡಿದ್ದಾರೆ. ಅವರ ಆಟ ನಡೆಯುವುದಿಲ್ಲ. ಚಾಮುಂಡೇಶ್ವರಿ ಆಶೀರ್ವಾದ ಪಡೆದು ಅದೇ ಕ್ಷೇತ್ರದಲ್ಲಿ ಪ್ರಚಾರ ನಡೆಸಿ ಮುಂದೆ ಸಾಗುತ್ತೇನೆ. ನ. 1 ರಿಂದ ರಾಜ್ಯ ಪ್ರವಾಸ ಕೈಗೊಂಡು, ಉತ್ತರ ಕರ್ನಾಟಕದ 50 ಕ್ಷೇತ್ರಗಳಲ್ಲಿ ಪ್ರತಿದಿನ ಸಭೆ ನಡೆಸುತ್ತೇನೆ. ಅಧಿಕಾರಕ್ಕೆ ಬಂದರೆ ಎರಡು ವರ್ಷದಲ್ಲಿ ರಾಜ್ಯದ ಚಿತ್ರಣ ಬದಲಿಸುತ್ತೇನೆ ಎಂದರು.
Comments