ಬಿಜೆಪಿ ಮತ್ತು ಕಾಂಗ್ರೆಸ್‌ನಿಂದ ಸುಮಾರು ಶಾಸಕರು ಜೆಡಿಎಸ್‌ಗೆ ಸೇರಲು ತಯಾರಿ

20 Oct 2017 9:15 AM |
8799 Report

ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಬೆಳಗಾವಿ ಜಿಲ್ಲೆಯ ಇಬ್ಬರು ಶಾಸಕರು ಈಗಾಗಲೇ ತಮ್ಮ ಮತ ಕ್ಷೇತ್ರದಲ್ಲಿ ಆಪ್ತರೊಂದಿಗೆ ಜೆಡಿಎಸ್ ಸೇರುವ ಸಂಬಂಧ ಚರ್ಚೆ ನಡೆಸಿದ್ದಾರೆ….

 

ಇವರು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಜತೆಯಲ್ಲಿ ಸಂಪರ್ಕದಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಉತ್ತರಕರ್ನಾಟಕ ಭಾಗದಲ್ಲಿ ಜೆಡಿಎಸ್‌ ಭದ್ರವಾಗಿ ನೆಲೆಯೂರುವ ಉದ್ದೇಶದಿಂದ ಹಿಂದಿನ ಜನತಾಪರಿವಾರದ ನಾಯಕರು ಮತ್ತು ಪ್ರಬಲ ಮುಖಂಡರನ್ನು ಸೆಳೆಯುವ ಪ್ರಯತ್ನ ನಡೆಸಿದೆ.

ಬೆಳಗಾವಿ ಜಿಲ್ಲೆಯ ಈ ನಾಯಕರಿಗೆ ಬಿಜೆಪಿ ರಾಜ್ಯ ನಾಯಕತ್ವದ ಜತೆಗೆ ಹೊಂದಾಣಿಕೆ ಸಮಸ್ಯೆ ಇದ್ದು, ಪಕ್ಷದಲ್ಲಿ ಮುಂದುವರಿಯಲು ಆಸಕ್ತಿ ಹೊಂದಿಲ್ಲ ಎಂದು ಮೂಲಗಳು ಹೇಳಿವೆ. ಹೃದಯದ ಶಸ್ತ್ರಚಿಕಿತ್ಸೆಗೆ ಒಳಗಾಗಿ ವಿಶ್ರಾಂತಿ ಪಡೆಯುತ್ತಿರುವ ಎಚ್‌.ಡಿ.ಕುಮಾರಸ್ವಾಮಿ ವಿಶ್ರಾಂತಿ ಪಡೆದು ಅಖಾಡಕ್ಕೆ ಇಲ್ಲಿದಾಗ ಆಸಕ್ತ ಶಾಸಕರು ಕುಮಾರಸ್ವಾಮಿ ಅವರನ್ನು ಸಂಪರ್ಕಿಸುವ ಸಾಧ್ಯತೆ ಇದೆ ಎಂದು ಜೆಡಿಎಸ್‌ ಮೂಲಗಳು ತಿಳಿಸಿವೆ.

Edited By

Suresh M

Reported By

hdk fans

Comments