ಕುಮಾರಣ್ಣನ ಮೊದಲ ಗ್ರಾಮ ವಾಸ್ತವ್ಯ ಬಸವಣ್ಣನ ಹುಟ್ಟೂರಿಂದ ಶುರು

ಮುಖ್ಯಮಂತ್ರಿಯಾಗಿದ್ದಾಗ ತಮಗೆ ಅತ್ಯಂತ ಜನಪ್ರಿಯತೆ ತಂದುಕೊಟ್ಟ ಗ್ರಾಮ ವಾಸ್ತವ್ಯಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮತ್ತೆ ಮೊರೆ ಹೋಗಿದ್ದಾರೆ. ಆದರೆ...
ಈ ಬಾರಿಯ ಗ್ರಾಮ ವಾಸ್ತವ್ಯಕ್ಕೆ ಐಶಾರಾಮಿ ಬಸ್ ಸಾಥ್ ನೀಡಲಿದೆ ಎನ್ನುವುದೇ ವಿಶೇಷ. ಸದ್ಯ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿ ಚೇತರಿಸಿಕೊಂಡಿರುವ ಕುಮಾರಸ್ವಾಮಿ ನವೆಂಬರ್ 15 ರಿಂದ ತಮ್ಮ ಗ್ರಾಮ ವಾಸ್ತವ್ಯ ಆರಂಭಿಸಲಿದ್ದು, ಮೊದಲ ಗ್ರಾಮ ವಾಸ್ತವ್ಯ ಬಸವನಬಾಗೇವಾಡಿಯಲ್ಲಿ ನಡೆಯಲಿದೆ. ಒಟ್ಟು 50 ವಿಧಾನಸಭಾ ಕ್ಷೇತ್ರಗಳ 62 ತಾಲೂಕುಗಳಲ್ಲಿ ತಲಾ ಒಂದೊಂದು ಗ್ರಾಮದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಈ ವೇಳೆ ದಿನಕ್ಕೆ 20 ಗ್ರಾಮಗಳಿಗೆ ಭೇಟಿ ನೀಡುವ ಉದ್ದೇಶವನ್ನು ಕುಮಾರಸ್ವಾಮಿ ಹೊಂದಿದ್ದಾರೆ.
Comments