ಗೌಡರು ಪರಿಹಾರ ಸಂಬಂಧ ಪ್ರಧಾನಿ ಹಾಗೂ ಮುಖ್ಯಮಂತ್ರಿಗೆ ಪತ್ರ ಬರೆಯಲಿದ್ದಾರೆ
ರಾಜ್ಯದ ಐದು ಜಿಲ್ಲೆಗಳಲ್ಲಿ ಮೆಕ್ಕೆಜೋಳ ಬೆಳೆ ಹಾನಿಗೊಳಗಾಗಿದ್ದು, ರೈತರಿಗೆ ಪರಿಹಾರ ಕಲ್ಪಿಸುವ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆಯುವುದರ....
ಜತೆಗೆ ನೇರವಾಗಿ ಭೇಟಿ ಮಾಡಿ ಚರ್ಚಿಸಲು ಸಮಯಾವಕಾಶ ಕೇಳಲಾಗುವುದು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ. ಚಿತ್ರದುರ್ಗ, ಬಳ್ಳಾರಿ, ದಾವಣಗೆರೆ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮೆಕ್ಕೆಜೋಳ ಹಾನಿಗೊಳಗಾಗಿದ್ದು, ನಾನು ಆ ಪ್ರದೇಶಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದೇನೆ.
ಆ ನಂತರ ರೈತರಿಗೆ ಪರಿಹಾರ ಕಲ್ಪಿಸುವ ಸಂಬಂಧ ಪ್ರಧಾನಿ ಹಾಗೂ ಮುಖ್ಯಮಂತ್ರಿಯವರಿಗೆ ಪತ್ರ ಬರೆಯಲಿದ್ದೇನೆ. ಜೊತೆಗೆ ಖುದ್ದು ಭೇಟಿಯಾಗಿ ಚರ್ಚಿಸಲು ಪ್ರಧಾನಿ ಹಾಗೂ ಮುಖ್ಯಮಂತ್ರಿಯವರ ಸಮಯಾವಕಾಶ ಸಹ ಕೋರಲಿದ್ದೇನೆ ಎಂದರು.
Comments