ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲುವು ನಮ್ಮದೇ, ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ :HDK
ಮುಂದಿನ ವಿದಾನಸಭೆ ಚುನಾವಣೆಗೆ ಜೆಡಿಎಸ್ ನ.3 ರಿಂದ ಅಧಿಕೃತವಾಗಿ ಪ್ರಚಾರ ಆರಂಭಿಸಲಿದೆ. ಮೈಸೂರಿನ ಚಾಮುಂಡೇಶ್ವರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಪ್ರಚಾರ ಪ್ರಾರಂಭಿಸುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ...
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದ್ದೇವೆ. ಶತಾಯ ಗತಾಯ ಈ ಬಾರಿ ಚಾಮುಂಡೇಶ್ವರಿ ಕ್ಷೇತ್ರ ಯಾರಿಗೂ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು. ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿದ್ದ ದೇವರ ಹಿಪ್ಪರಗಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರು ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಅದೇ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಪಾಟೀಲ್ ಹಾಗೂ ತಮ್ಮ ನಡುವೆ ಹಲವು ವರ್ಷಗಳ ಉತ್ತಮ ಗೆಳೆತನವಿದೆ ಎಂದು ಹೇಳಿದರು.
Comments