ಅ.31 ರಂದು ರಿಯಲ್ ಸ್ಟಾರ್ ಉಪೇಂದ್ರರಿಂದ ಹೊಸ ಪಕ್ಷದ ಹೆಸರು ಘೋಷಣೆ
ನಾಳೆ ಬೆಂಗಳೂರಿನಲ್ಲಿ ಶಿವಾನಂದ ವೃತ್ತದ ಬಳಿ ಇರುವ ಗಾಂಧಿ ಭವನದಲ್ಲಿ ಈ ಬಗ್ಗೆ ಮಾಧ್ಯಮಗೋಷ್ಟಿ ನಡೆಯಲ್ಲಿದ್ದು ಈ ವೇಳೆಯಲ್ಲಿ ಅವರು ತಮ್ಮ ಹೊಸ ಪಕ್ಷದ ಹೆಸರನ್ನು ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ.
ನಾಳೆ ರಾಜಕೀಯ ರಂಗಕ್ಕೆ ಮತ್ತೊಂದು ಪಕ್ಷ ಸೇರ್ಪಡೆಯಾಗಲಿದ್ದು, ನಟ ರಿಯಲ್ ಸ್ಟಾರ್ ಉಪೇಂದ್ರ ಅವರು ತಮ್ಮ ಹೊಸ ಪಕ್ಷದ ಹೆಸರನ್ನು ಗೋಷಣೆ ಮಾಡಲಿದ್ದಾರೆ.ಆಗಸ್ಟ್ ತಿಂಗಳಿನಲ್ಲಿ ತಮ್ಮ ರಾಜಕೀಯ ಎಂಟ್ರಿ ಬಗ್ಗೆ ಅಧಿಕೃತವಾಗಿ ಘೋಷಿಸಿದ್ದ ನಟ ಉಪೇಂದ್ರ ಆ ವೇಳೆಯಲ್ಲಿ 'ಪಕ್ಷದ ಹೆಸರು ಹಾಗೂ ಚಿಹ್ನೆಯನ್ನು ನೋಂದಾಯಿಸಿದ ನಂತರ ಅವುಗಳನ್ನು ಬಹಿರಂಗಪಡಿಸಲಾಗುವುದು. ಸದ್ಯಕ್ಕೆ ನಮ್ಮ ವೇದಿಕೆಯನ್ನು ಪ್ರಜಾಕೀಯ, ಪ್ರಜಾಕಾರಣ ಎಂಬ ಹೆಸರಿನಿಂದ ಕರೆಯಲಾಗುವುದು' ಅಂತ ಹೇಳಿದ್ದರು. ಈಗ ಎಲ್ಲಾ ಕೂತೂಹಲಗಳಿಗೆ ನಾಳೆ ತೆರೆ ಬೀಳಲಿದೆ.
ಮುಂಬರುವ ವಿಧಾನಸಭಾ ಚುನಾವಣೆಯ ದೃಷ್ಟಿಯಿಂದ ನಟ ಉಪೇಂದ್ರ ಅವರು ತಮ್ಮ ಹೊಸ ಪಕ್ಷದಿಂದ ರಾಜ್ಯ ಎಲ್ಲಾ ವಿಧಾನಸಭಾ ಕ್ಷೇತ್ರದಿಂದ ಅಭ್ಯರ್ಥಿಗಳನ್ನು ಸ್ಪರ್ಧಿಸುವ ಉದ್ದೇಶ ಹೊಂದಿದ್ದಾರೆ. ಆದರೆ ರಾಜ್ಯದಲ್ಲಿ ಹೊಸ ಪಕ್ಷವೊಂದು ಎಷ್ಟರ ಮಟ್ಟಿಗೆ ಯಶಸ್ಸು ಸಾಧಿಸುತ್ತದೆ.ಎಷ್ಟರ ಮಟ್ಟಿಗೆ ಉಪೇಂದ್ರ ಅವರು ರಾಜಕೀಯ ಕ್ಷೇತ್ರದಲ್ಲಿ ಜಯ ಸಾಧಿಸುತ್ತಾರೆ ಎನ್ನುವುದು ಕಾದು ನೋಡಬೇಕಾಗಿದೆ.
Comments