ಪ್ರಜ್ವಲ್ ರೇವಣ್ಣ ಅಖಾಡಕ್ಕಿಳಿಯಲು ದೇವೇಗೌಡರಿಂದ ಗ್ರೀನ್ ಸಿಗ್ನಲ್
ಬೇಲೂರು ಅಥವಾ ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಪ್ರಜ್ವಲ್ ಪರ ಒಲವಿದ್ದು, ಈ ಎರಡೂ ಕ್ಷೇತ್ರಗಳಲ್ಲಿ ಯಾವುದಾದರೂ ಒಂದು ಕ್ಷೇತ್ರದಿಂದ ಪ್ರಜ್ವಲ್ ಕಣಕ್ಕಿಳಿಯಲಿದ್ದಾನೆ ಎಂದರು. ಆದರೆ ಪ್ರಜ್ವಲ್ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುದನ್ನು ಪಕ್ಷದ ವರಿಷ್ಠರು ತೀರ್ಮಾನಿಸಲಿದ್ದಾರೆ. ಅವರ ತೀರ್ಮಾನವನ್ನು ಪ್ರಜ್ವಲ್ ಶಿರಸಾ ಪಾಲಿಸಲಿದ್ದಾನೆ ಎಂದು ಭವಾನಿ ರೇವಣ್ಣ ಹೇಳಿದರು.
ನ.6-ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಸ್ಪರ್ಧಿಸುವುದು ಬಹುತೇಕ ಖಚಿತಪಟ್ಟಿದೆ. ಪ್ರಜ್ವಲ್ ರೇವಣ್ಣ ಅವರ ತಾಯಿ ಭವಾನಿ ರೇವಣ್ಣ ಅವರು ಈ ವಿಷಯವನ್ನು ಖಚಿತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಕಾತುರನಾಗಿದ್ದು, ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡರು ಅದಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂದು ತಿಳಿಸಿದರು.
ದೇವೇಗೌಡರ ಕುಟುಂಬದಿಂದ ರೇವಣ್ಣ ಮತ್ತು ಕುಮಾರಸ್ವಾಮಿ ಮಾತ್ರ ಚುನಾವಣಾ ಕಣಕ್ಕಿಳಿಯಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದವು. ಆದರೆ ಅಭಿಮಾನಿಗಳು ಮತ್ತು ಕಾರ್ಯಕರ್ತರು ಪ್ರಜ್ವಲ್ ರೇವಣ್ಣ, ಭವಾನಿರೇವಣ್ಣ ಹಾಗೂ ಅನಿತಾ ಕುಮಾರಸ್ವಾಮಿ ಅವರನ್ನು ಚುನಾವಣೆಗೆ ನಿಲ್ಲಿಸುವಂತೆ ಒತ್ತಡ ತರುತ್ತಿದ್ದರು. ಕೊನೆಗೂ ಕಾರ್ಯಕರ್ತರ ಮಾತಿಗೆ ಮನ್ನಣೆ ದೊರಕಿದ್ದು, ಪ್ರಜ್ವಲ್ ರೇವಣ್ಣ ಅವರು ರಾಜಕೀಯಕ್ಕೆ ಬರಲು ಕಾಲ ಸನ್ನಿಹಿತವಾಗಿದೆ. ಆದರೆ ಭವಾನಿ ರೇವಣ್ಣ ಹಾಗೂ ಅನಿತಾ ಕುಮಾರಸ್ವಾಮಿ ಚುನಾವಣಾ ಅಖಾಡಕ್ಕೆ ಇಳಿಯಲಿದ್ದಾರೆಯೇ ಎಂಬುದಕ್ಕೆ ಇನ್ನೂ ಉತ್ತರ ಸಿಕ್ಕಿಲ್ಲ.
Comments