ನಾನು ಯಾವುದೇ ತಪ್ಪು ಮಾಡಿಲ್ಲ : ಡಿಕೆ ಶಿವಕುಮಾರ್ ಪ್ರತಿಕ್ರಿಯೆ

06 Nov 2017 6:21 PM |
596 Report

ಐಟಿ ಅಧಿಕಾರಿಗಳ ವಿಚಾರಣೆ ಬಳಿಕ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ನಾನು ನ್ಯಾಯಬದ್ಧವಾಗಿ ನಡೆದುಕೊಂಡಿದ್ದೇನೆ. ನಾವು ಯಾವುದೇ ಮಾಹಿತಿ ಮುಚ್ಚಿಡುವ ಪ್ರಯತ್ನ ಮಾಡಲ್ಲ. ಅಧಿಕಾರಿಗಳು ನನ್ನ ಜತೆ ಸೌಹಾರ್ದಯುತವಾಗಿ ನಡೆದುಕೊಂಡಿದ್ದಾರೆ.

ನಾನು ಯಾವುದೇ ತಪ್ಪು ಮಾಡಿಲ್ಲ. ತನಿಖೆಗೆ ಸಹಕಾರ ನೀಡುತ್ತೇನೆ ಎಂದು ಅಂದೇ ಹೇಳಿದ್ದೇನೆ. ಮಾಹಿತಿ ಸಿಕ್ಕಿರೋದು ಸಾಕಾಗಿಲ್ಲ ಎಂದು ಮತ್ತಷ್ಟು ವಿಚಾರಣೆ ನಡೆಸಿದ್ದಾರೆ. ಅವರ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ್ದೇನೆ..ಇದು ಇಂಧನ ಸಚಿವ ಡಿಕೆ ಶಿವಕುಮಾರ್ ಪ್ರತಿಕ್ರಿಯೆ. ನಮ್ಮ ಕುಟುಂಬದ ಸದಸ್ಯರು ವಿಚಾರಣೆಗೆ ಸಹಕರಿಸಿದ್ದಾರೆ. ಮುಂದಿನ ದಿನಗಳಲ್ಲಿ ಮತ್ತೆ ವಿಚಾರಣೆಗೆ ಹಾಜರಾಗಬೇಕೆಂದು ಹೇಳಿದ್ದಾರೆ. ಕಾನೂನನ್ನು ನಾನು ಪ್ರಶ್ನೆ ಮಾಡಲು ಹೋಗಲ್ಲ. ನಾನೊಬ್ಬ ಸಾಮಾನ್ಯ ಪ್ರಜೆಯಾಗಿ ವಿಚಾರಣೆಗೆ ಹಾಜರಾಗಿದ್ದೇನೆ. ಎಲ್ಲಾ ರೀತಿಯಿಂದಲೂ ತನಿಖೆಗೆ ಸಹಕರಿಸಿದ್ದೇನೆ ಎಂದು ಹೇಳಿದರು.

Edited By

dks fans

Reported By

dks fans

Comments