ಕಾಂಗ್ರೆಸ್ ನ ಮತ್ತೊಂದು ವಿಕೆಟ್ ಡಿಸೆಂಬರ್ ನಲ್ಲಿ ಜೆಡಿಎಸ್ ಗೆ ಸೇರ್ಪಡೆ
ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಕಟ್ಟಾ ಬೆಂಬಲಿಗನಾಗಿದ್ದ ರವೀಂದ್ರ ಶ್ರೀಕಂಠಯ್ಯ ಅವರು ಈಗ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವುದು ಮಂಡ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.
ಶ್ರೀರಂಗಪಟ್ಟಣಕ್ಕೆ ಆಗಮಿಸಿದ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿಗೆ ರವೀಂದ್ರ ಶ್ರೀಕಂಠಯ್ಯ ಅದ್ದೂರಿ ಸ್ವಾಗತ ಕೋರಿದರು. ರವೀಂದ್ರ ಶ್ರೀಕಂಠಯ್ಯರನ್ನು ಶ್ರೀರಂಗಪಟ್ಟಣ ಕ್ಷೇತ್ರದ ಚುನಾವಣಾ ಅಭ್ಯರ್ಥಿಯಾಗಿ ಕುಮಾರಸ್ವಾಮಿ ಘೋಷಿಸಿದರು. ರವೀಂದ್ರ ಶ್ರೀಕಂಠಯ್ಯ ಬೆಂಬಲಿಗರು ಸಂಭ್ರಮದಿಂದ ಘೋಷಣೆಗಳನ್ನು ಕೂಗಿದರು.
ರವೀಂದ್ರ ಶ್ರೀಕಂಠಯ್ಯ ಅವರು ಮಾತನಾಡಿ ಮುಂದಿನ ಚುನಾವಣೆಯಲ್ಲಿ ಜೆಡಿಎಸ್‍ನ್ನು ಅಧಿಕಾರಕ್ಕೆ ತರುವುದು ಹಾಗೂ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುವುದು ನಮ್ಮೆಲ್ಲರ ಗುರಿಯಾಗಿದೆ. ಅದಕ್ಕಾಗಿ ಎಲ್ಲರೂ ಒಗ್ಗೂಡಿ ಶ್ರಮಿಸುತ್ತೇವೆ ಎಂದರು.
Comments