ಕಾಂಗ್ರೆಸ್ ಗೆ ಸೆಡ್ಡು ಹೊಡೆಯಲು ಕಾಫಿನಾಡಲ್ಲಿ ಎಚ್ ಡಿಕೆ ಮಾಸ್ಟರ್ ಪ್ಲಾನ್
ವಿಧಾನಸಭಾ ಚುನಾವಣೆಗೆ ಆರು ತಿಂಗಳಿರುವಾಗಲೇ ಪ್ರಮುಖ ರಾಜಕೀಯ ಪಕ್ಷಗಳು ಚುನಾವಣಾ ಪೂರ್ವ ತಯಾರಿ ಭರದಿಂದ ಸಾಗುತ್ತಿದೆ. ಮನೆ-ಮನೆ ಕಾಂಗ್ರೆಸ್, ನವಕರ್ನಾಟಕ ಯಾತ್ರೆ ಮೂಲಕ ಅಂತಾರಾಷ್ಟ್ರೀಯ ಪಕ್ಷಗಳು ಊರೂರು ಸುತ್ತುತ್ತಿದ್ರೆ, ನಾವೇನು ಕಮ್ಮಿ ಎಂಬಂತೆ ಮಾಜಿ ಸಿಎಂ ಕುಮಾರಸ್ವಾಮಿ ಸೆಡ್ಡು ಹೊಡಿದಿದ್ದಾರೆ.
ಇಂದು ಕರ್ನಾಟಕ ವಿಕಾಸ ವಾಹಿನಿ ಯಾತ್ರೆಗೆ ಚಾಲನೆ ನೀಡಲಿರುವ ಕುಮಾರಸ್ವಾಮಿ ಬಳಿಕ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಮುಗುಳುವಳ್ಳಿಯ ದಲಿತ ಕುಟುಂಬ ಧರ್ಮಪಾಲ್ ಮನೆಯಲ್ಲಿ ಗ್ರಾಮ ವಾಸ್ತವ್ಯ ನಡೆಸುವ ಮೂಲಕ ಚುನಾವಣಾ ರಣಕಹಳೆ ಊದಲಿದ್ದಾರೆ.ಕುಮಾರಸ್ವಾಮಿ ಹಾಸನ ಮಾರ್ಗವಾಗಿ ಚಿಕ್ಕಮಗಳೂರಿಗೆ ಆಗಮಿಸಲಿದ್ದಾರೆ. ನಗರದ ಆಜಾದ್ ವೃತ್ತದಲ್ಲಿ ಕಾರ್ಯಕರ್ತರನ್ನ ಉದ್ದೇಶಿಸಿ ಮಾತನಾಡಲಿರೋ ಕುಮಾರಸ್ವಾಮಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವೈಫಲ್ಯಗಳನ್ನ ಜನರ ಮುಂದಿಡಲಿದ್ದಾರೆ.
ಒಟ್ಟಾರೆಯಾಗಿ ಕಾಫಿನಾಡು ಚಿಕ್ಕಮಗಳೂರು ಮಾಜಿ ಪ್ರಧಾನಿ ಇಂದಿರಾ ಗಾಂಧಿಗೆ ರಾಜಕೀಯ ಮರುಜನ್ಮ ನೀಡಿದ ಜಿಲ್ಲೆ. ಅಂತಹ ವಿಶೇಷ ರಾಜಕೀಯ ಇತಿಹಾಸವಿರೋ ಕಾಫಿ ನಾಡಲ್ಲೇ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಗ್ರಾಮ ವಾಸ್ತವ್ಯದ ಮೂಲಕ ಚುನಾವಣಾ ಅಖಾಡಕ್ಕೆ ಇಳಿಯುತ್ತಿರೋದು, ರಾಜಕೀಯ ಪಂಡಿತರ ಲೆಕ್ಕಾಚಾರದಲ್ಲಿ ಕುಮಾರಸ್ವಾಮಿ ಈ ಬಾರಿ ಚಿಕ್ಕಮಗಳೂರನ್ನ ಅದೃಷ್ಟ ಪರೀಕ್ಷೆಗೆ ಆಯ್ಕೆ ಮಾಡಿಕೊಂಡ್ರಾ ಎಂಬ ಅನುಮಾನ ಹುಟ್ಟಾಕಿದೆ.
Comments