ಬೆಳಗಾವಿ ಅಧಿವೇಶನದಲ್ಲಿ ಬಿಜೆಪಿಗೆ ಎಚ್ ಡಿ ಕೆ ಕಿವಿ ಮಾತು

14 Nov 2017 12:36 PM | Politics
2137 0 Report

ಬೆಳಗಾವಿಯಲ್ಲಿ ಅಧಿವೇಶನಕ್ಕೆ ಅಡ್ಡಿಯುಂಟು ಮಾಡಬೇಡಿ ಎಂದು ಬಿಜೆಪಿ ನಾಯಕರಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿಯವರು  ಹೇಳಿದ್ದಾರೆ. ರಾಜಕೀಯ ಪ್ರೇರಿತ ವಿಚಾರಗಳಿಂದ ಅಧಿವೇಶನದ ಸಮಯವನ್ನು ವ್ಯರ್ಥ ಮಾಡದಂತೆ ಹಾಗೂ ಅಭಿವೃದ್ಧಿ ವಿಚಾರಗಳ ಕುರಿತಂತೆ ಚರ್ಚೆ ನಡೆಸುವಂತೆ ಮನವಿ ಮಾಡಿಕೊಳ್ಳುತ್ತೇನೆಂದು ಹೇಳಿದ್ದಾರೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನವನ್ನು ಅರ್ಥಪೂರ್ಣವಾಗಿ ನಡೆಸಬೇಕಿದ್ದು, ಶೀಘ್ರದಲ್ಲಿಯೇ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿಯವರು  ಹೇಳಿದ್ದಾರೆ. ಮಾತುಕತೆ ವೇಳೆ ರಾಜಕೀಯ ಪ್ರೇರಿತ ವಿಚಾರಗಳಿಂದ ಅಧಿವೇಶನದ ಸಮಯವನ್ನು ವ್ಯರ್ಥ ಮಾಡದಂತೆ ಹಾಗೂ ಅಭಿವೃದ್ಧಿ ವಿಚಾರಗಳ ಕುರಿತಂತೆ ಚರ್ಚೆ ನಡೆಸುವಂತೆ ಮನವಿ ಮಾಡಿಕೊಳ್ಳುತ್ತೇನೆಂದು ಹೇಳಿದ್ದಾರೆ.

ಕಳೆದ ಬಾರಿ ನಡೆದ ಅಧಿವೇಶನದಲ್ಲಿ ರಾಜಕೀಯ ಪ್ರೇರಿತ ವಿಚಾರಗಳು ಚರ್ಚೆಯಾಗಿದ್ದರಿಂದಾಗಿ ಅಧಿವೇಶನದ ಸಮಯ ಹಾಗೂ ಸಾರ್ವಜನಿಕರ ಹಣ ವ್ಯರ್ಥವಾಗಿತ್ತು. ಒಂದು ವೇಳೆ ಬಿಜೆಪಿ ತನ್ನ ಪ್ರತಿಭಟನೆಯನ್ನು ಹೀಗೆಯೇ ಮುಂದುವರೆಸಿದ್ದೇ ಆದರೆ, ಜೆಡಿಎಸ್ ತನ್ನ ಮೌನವನ್ನು ಮುಂದುವರೆಸಲಿದೆ. ರಾಜಕೀಯ ತಂತ್ರಗಳ ಬಳಕೆ ಬದಲು ಅಧಿವೇಶನದಿಂದ ಧನಾತ್ಮಕ ಪ್ರತಿಫಲಗಳು ಬರುವುದನ್ನು ಜೆಡಿಎಸ್ ಬಯಸುತ್ತದೆ ಎಂದು ಜೆಡಿಎಸ್ ನಾಯಕರೊಬ್ಬರು ಹೇಳಿದ್ದಾರೆ. ಈ ನಡುವೆ ಪಟ್ಟು ಬಿಡದ ಬಿಜೆಪಿ ಸದಸ್ಯರು, ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂಧ ಆರೋಪ ಎದುರಿಸುತ್ತಿರುವ ಸಚಿವ ಜಾರ್ಜ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೂ ರಾಜ್ಯ ಸರ್ಕಾರದ ವಿರುದ್ಧ ನಡೆಸುತ್ತಿರುವ ತಮ್ಮ ಪ್ರತಿಭಟನೆಯನ್ನು ಮುಂದುವರೆಸುವುದಾಗಿ ಹೇಳಿದ್ದಾರೆ. 

Edited By

Hema Latha

Reported By

Madhu shree

Comments

Upload

Upload News

Create

Create Community