ಅಡಿಗಲ್ಲು ಹಾಕಿದ ಕುಮಾರಣ್ಣನ ಹೆಸರೇ ಮಾಯ : ಎಚ್.ಡಿ. ದೇವೇಗೌಡ

ಬೆಳಗಾವಿ ಸುವರ್ಣ ವಿಧಾನಸೌಧ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ ಎಚ್.ಡಿ. ಕುಮಾರಸ್ವಾಮಿಯವರ ಹೆಸರನ್ನು ಕಲ್ಲಿನಲ್ಲಿ ಕೆತ್ತಲಾಗಿತ್ತು. ಅದನ್ನು ತೆಗೆದು ಹಾಕಿ ತಮ್ಮ ಹೆಸರು ಬಳಸಿಕೊಂಡಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಟೀಕಿಸಿದರು.
ನಗರದ ಸಿಪಿಎಡ್ ಮೈದಾನದಲ್ಲಿ ಮಂಗಳವಾರ ನಡೆದ ರೈತರ ಬೃಹತ್ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ನಿರ್ಮಾಣವಾದ ಸುವರ್ಣಸೌಧದಲ್ಲಿ ಕಲ್ಲಿನಲ್ಲಿ ಹಾಕಿದ್ದ ಕುಮಾರಣ್ಣನ ಹೆಸರನ್ನು ತೆಗೆದು ಹಾಕಲಾಗಿದೆ. ಆದರೆ, ಜನರ ಹೃದಯದಿಂದ ಕುಮಾರಣ್ಣನನ್ನು ತೆಗೆದು ಹಾಕಲು ಸಾಧ್ಯವಿಲ್ಲ. ಸುವರ್ಣ ವಿಧಾನಸೌಧ ನಿರ್ಮಿಸಿದ ಶ್ರೇಯಸ್ಸು ಕುಮಾರಸ್ವಾಮಿಗೆ ಸಲ್ಲುತ್ತದೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಹೇಳಿದರು.
Comments