ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಪ್ರತಿಪಾದಿಸಿಕೊಂಡ ಇಂಧನ ಸಚಿವ ಡಿಕೆ ಶಿವಕುಮಾರ್
ರಾಜ್ಯದ ಆರ್ಥಿಕ ಪರಿಸ್ಥಿತಿ ಸುಸ್ಥಿತಿಯಲ್ಲಿದ್ದು, ಕೇಂದ್ರದ ಕೆಲವು ಕ್ರಮಗಳಿಂದ ತಾತ್ಕಾಲಿಕವಾಗಿ ಸ್ವಲ್ಪ ಮಟ್ಟಿನ ಹಿನ್ನಡೆಯಾಗಿದ್ದರೂ ಮುಂದಿನ ದಿನಗಳಲ್ಲಿ ಚೇತರಿಸಿಕೊಂಡು ನಿರೀಕ್ಷಿತ ಸಂಪನ್ಮೂಲ ಕ್ರೋಢೀಕರಣವಾಗಲಿದೆ ಎಂದು ರಾಜ್ಯ ಸರ್ಕಾರ ಪ್ರತಿಪಾದಿಸಿದೆ.
ಪ್ರಸಕ್ತ ಸಾಲಿನ ಆರು ತಿಂಗಳಲ್ಲಿ ರಾಜ್ಯದ ಸ್ವಂತ ತೆರಿಗೆ ಮೂಲಗಳಿಂದ ಶೇ.49 ಸಾಧನೆ ಮಾಡಲಾಗಿದ್ದು, ಕಳೆದ ವರ್ಷಕ್ಕಿಂತ ಶೇ.1 ಪ್ರಗತಿಯಾಗಿದೆ ಎಂದು ತಿಳಿಸಿದೆ. ರಾಜ್ಯ ಹಣಕಾಸಿನ ಮಧ್ಯವಾರ್ಷಿಕ ಪರಿಶೀಲನೆ 2017-18ನೇ ವರದಿಯನ್ನು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಮಂಡಿಸಿದ್ದು, ವರದಿಯಲ್ಲಿ ರಾಜ್ಯದ ಆರ್ಥಿಕ ಬೆಳವಣಿಗೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಲಾಗಿದೆ. ವಾಣಿಜ್ಯ, ಅಬಕಾರಿ, ಮೋಟಾರು ವಾಹನ ಮತ್ತು ನೋಂದಣಿ ಮತ್ತು ಮುದ್ರಾಂಕ ಬಾಬಿನಲ್ಲಿ 2017 ಏಪ್ರಿಲ್‌ನಿಂದ ಸೆಪ್ಟೆಂಬರ್‌ವರೆಗೆ 26753 ಕೋಟಿ ರೂ. ಸಂಗ್ರಹ ಮಾಡಲಾಗಿದ್ದು, ಇದು ಬಜೆಟ್‌ನ ನಿರೀಕ್ಷಿತ ಸಂಪನ್ಮೂಲದ ಶೇ.49 ಕಳೆದ ವರ್ಷ ಇದರ ಪ್ರಮಾಣ ಶೇ.48 ಇತ್ತು ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.
Comments