ಕೊಂಗಾಡಿಯಪ್ಪ ಕಾಲೇಜಿನ ಸುವರ್ಣ ಮಹೋತ್ಸವ






ದೊಡ್ಡಬಳ್ಳಾಪುರದಲ್ಲಿರುವ ಹೆಸರಾಂತ ಕೊಂಗಾಡಿಯಪ್ಪ ಕಾಲೇಜಿನ ಸುವರ್ಣ ಮಹೋತ್ಸವ ವರ್ಷಾಚರಣೆಯನ್ನು ೨೦೧೭-೧೮ ರಲ್ಲಿ ನಡೆಸಲು ಇಲ್ಲಿನ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ ಸ್ಮಾರಕ ವಿದ್ಯಾಸಂಸ್ಥೆ ತೀರ್ಮಾನಿಸಿದೆ. ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ ನವರ ಹೆಸರಿನಲ್ಲಿ ೧೯೬೮ರಲ್ಲಿ ಪ್ರಾರಂಭವಾದ ವಿದ್ಯಾಸಂಸ್ಥೆಯು ಇಂದು ಸುವರ್ಣ ಮಹೋತ್ಸವವನ್ನು ಆಚರಿಸಿಕೊಳ್ಳುತ್ತಿದೆ. ಗ್ರಾಮೀಣ ಹಾಗೂ ನಗರ ಪ್ರದೇಶದ ಹಿಂದುಳಿದ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಮತ್ತು ವಿಶೇಷವಾಗಿ ಹೆಣ್ಣುಮಕ್ಕಳಿಗೆ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಾ ಬಂದಿದೆ. ಇದರ ಫಲವಾಗಿ ಇಂದು ಪೂರ್ವ ಪ್ರಾಥಮಿಕ ತರಗತಿಯಿಂದ ಸ್ನಾತಕೋತ್ತರ ಪದವಿಯವರೆಗೆ ಒಂದೇ ಕ್ಯಾಂಪಸ್ ನಲ್ಲಿ ಶಿಕ್ಷಣ ದೊರೆಯುವ ವ್ಯವಸ್ಥೆ ಕಲ್ಪಿಸಲಾಗಿದೆ. ಶ್ರೀ ಕೊಂಗಾಡೀಯಪ್ಪ ಶಿಕ್ಷಣ ಮಹಾ ವಿದ್ಯಾಲಯ ೨೦೧೭-೧೮ನೇ ಸಾಲಿನಲ್ಲಿ ೨ ವರ್ಷಗಳ ಬಿ.ಎಡ್. ತರಗತಿ ಪ್ರಾರಂಭಿಸುವುದರೊಂದಿಗೆ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶವನ್ನು ಕಲ್ಪಿಸಲಾಗಿದೆ.
Comments