ಕುಮಾರಸ್ವಾಮಿಯವರು ರಾಜ್ಯದ ಮುಖ್ಯಮಂತ್ರಿ ಆಗುವುದು ಖಚಿತ

ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಜೆಡಿಎಸ್ ಪಕ್ಷವು ಹೆಚ್ಚು ಸ್ಥಾನ ಗಳಿಸಿ ರಾಜ್ಯದ ಅಧಿಕಾರ ಚುಕ್ಕಾಣಿ ಹಿಡಿಯಲಿದ್ದು, ಕುಮಾರಸ್ವಾಮಿ ಅವರು ರಾಜ್ಯದ ಮುಖ್ಯಮಂತ್ರಿ ಆಗುವುದು ಖಚಿತ ಎಂದು ಜೆಡಿಎಸ್ ಮುಖಂಡ ಮೋಹನ ಜಿಗಳೂರು ತಿಳಿಸಿದ್ದಾರೆ. ಈಗಾಗಲೇ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ನೀಡುವ ಆಡಳಿತದಿಂದ ರೈತರು, ಸಾಮಾನ್ಯ ಜನತೆ ಸೇರಿದಂತೆ ಎಲ್ಲಾ ವರ್ಗದ ಜನತೆ ಸಹ ಬೇಸತ್ತು ಹೋಗಿದ್ದಾರೆ. ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾಗಿರುವ ಕುಮಾರಸ್ವಾಮಿ ಅವರು ಮುಂದಿನ ಚುನಾವಣೆ ನಂತರ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.
ಈ ಹಿಂದೆ ಕುಮಾರಸ್ವಾಮಿ ಅವರು ಇಪ್ಪತ್ತು ತಿಂಗಳ ಆಡಳಿತಾವಧಿಯಲ್ಲಿ ನೀಡಿರುವ ಕಾರ್ಯಕ್ರಮವನ್ನು ಮನಗಂಡ ರಾಜ್ಯದ ಜನತೆ ಮತ್ತೊಮ್ಮೆ ಕುಮಾರಸ್ವಾಮಿ ಅವರ ಆಡಳಿತವನ್ನು ಬಯಸಿದ್ದಾರೆ ಎಂದು ಜೆಡಿಎಸ್ ಮುಖಂಡ ಮೋಹನ ಜಿಗಳೂರು ತಿಳಿಸಿದ್ದಾರೆ.ಈ ಹಿನ್ನೆಲೆಯಲ್ಲಿ ರೈತಾಪಿ ವರ್ಗ ಸೇರಿದಂತೆ ಪ್ರತಿಯೊಬ್ಬರು ಜೆಡಿಎಸ್ ಪಕ್ಷದ ಬಗ್ಗೆ ಒಲವು ವ್ಯಕ್ತಪಡಿಸಿದ್ದಾರೆ ಎಂದರು. ಡಿಸೆಂಬರ್ ತಿಂಗಳಿನಲ್ಲಿ ಬಾಗಲಕೋಟೆ ನಗರದಲ್ಲಿ ಜೆಡಿಎಸ್ ಪಕ್ಷದಿಂದ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗುವುದು. ಆಗ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಆಗಮಿಸಲಿದ್ದು, ಕಾರ್ಯಕರ್ತರು ಪಕ್ಷದ ಸಂಘಟನೆಗೆ ಹೆಚ್ಚು ಒತ್ತು ನೀಡಬೇಕು ಎಂದರು. ಇದೇ ಸಂದರ್ಭದಲ್ಲಿ ನೂರಾರು ಯುವಕರಿಗೆ ಜೆಡಿಎಸ್ ಪಕ್ಷದ ಧ್ವಜವನ್ನು ನೀಡುವ ಮೂಲಕ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಯಿತು.
Comments