ಶ್ರೀ ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜಿನ ವತಿಯಿಂದ ತಾಲ್ಲೂಕಿನ ಎಸ್.ಎಂ.ಗೊಲ್ಲಹಳ್ಳಿ ಗ್ರಾಮದಲ್ಲಿ ಎನ್.ಎಸ್.ಎಸ್ ವಿಶೇಷ ಶಿಬಿರ
ನಗರದ ಶ್ರೀ ಕೊಂಗಾಡಿಯಪ್ಪ ಪದವಿಪೂರ್ವ ಕಾಲೇಜಿನವತಿಯಿಂದ ತಾಲ್ಲೂಕಿನ ಎಸ್.ಎಂ.ಗೊಲ್ಲಹಳ್ಳಿ ಗ್ರಾಮದಲ್ಲಿ ಎನ್.ಎಸ್.ಎಸ್ ವಿಶೇಷ ಶಿಬಿರವನ್ನು ಆಯೋಜಿಸಿದ್ದು, ಈ ಶಿಬಿರಕ್ಕೆ ಆಗಮಿಸಿದ ಜನಪ್ರಿಯ ಮಾಜಿ ಶಾಸಕರಾದ ಜೆ.ನರಸಿಂಹಸ್ವಾಮಿರವರು ಎನ್. ಎಸ್. ಎಸ್. ಧ್ವಜಾರೋಹಣ ನೇರವೇರಿಸಿ ಶಿಬಿರದ ಉದ್ಘಾಟನೆಯನ್ನು ಸಸಿಗಳಿಗೆ ನೀರೆರೆಯುವುದರ ಮುಖಾಂತರ ಉದ್ಘಾಟಿಸಿದರು.
ವಿಧ್ಯಾರ್ಥಿಗಳನ್ನು ಉದ್ದೇಶಿಸಿ ಮಾತಾನಾಡಿದ ಮಾಜಿ ಶಾಸಕ ಜೆ.ನರಸಿಂಹಸ್ವಾಮಿರವರು ಇಂದಿನ ಪೀಳಿಗೆಗೆ ರಾಷ್ಟ್ರೀಯ ಸೇವಾ ಯೋಜನೆಯ ಮಹತ್ವವನ್ನು ವಿವರಿಸಿದರು ಹಾಗೂ ಈ ಹಿಂದೆ ಎನ್ ಎಸ್ ಎಸ್ ಶಿಬಿರಗಳಲ್ಲಿ ಭಾಗಿಯಾಗಿದ್ದ ಹಳೆಯ ನೆನಪುಗಳನ್ನು ಮೆಲಕು ಹಾಕಿದರು. ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರಾದ ಕೆ.ಎಂ.ಕೃಷ್ಣಮೂರ್ತಿರವರು, ಕಾಲೇಜಿನ ಪ್ರಾಂಶುಪಾಲರಾದ ಡಿ.ಎನ್.ಬಾಬುರವರು, ಕಾಲೇಜಿನ ನಿರ್ದೇಶಕರಾದ ಕೆ.ಎಂ.ಕೃಷ್ಣಮೂರ್ತಿ, ರಾಜಲಕ್ಷ್ಮಿ, ಉಪನ್ಯಾಸಕರುಗಳು ಶಿಬಿರದಲ್ಲಿ ಭಾಗವಹಿಸಿದ್ದ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಊರಿನ ಗ್ರಾಮಸ್ಥರು ಹಾಜರಿದ್ದರು.
Comments