ಕುಮಾರ ಪರ್ವ ಯಾತ್ರೆಯ ಬಗ್ಗೆ ರಾಜಕೀಯ ವಿಶ್ಲೇಷಕರ ಅಭಿಪ್ರಾಯ

23 Nov 2017 5:24 PM |
4372 Report

ಜೆಡಿಎಸ್ ಅಧಿಕೃತವಾಗಿ ಘೋಷಣೆ ಮಾಡದಿದ್ದರೂ ಎಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ. ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಯಾತ್ರೆ ಮಾಡುವುದರಿಂದ ಅವರ ವರ್ಚಸ್ಸು ವೃದ್ಧಿಯಾಗಲಿದೆ. ಆದ್ದರಿಂದ, ಚುನಾವಣೆಯಲ್ಲಿ ಪಕ್ಷಕ್ಕೆ ಮತ್ತು ಕುಮಾರಸ್ವಾಮಿ ಅವರಿಗೆ ಲಾಭವಾಗಲಿದೆ.

ಬಿಜೆಪಿ ಮತ್ತು ಕಾಂಗ್ರೆಸ್ ರಾಷ್ಟ್ರೀಯ ಪಕ್ಷಗಳಾಗಿದ್ದು ಚುನಾವಣೆಯ ಸಮಯದಲ್ಲಿ ರಾಷ್ಟ್ರೀಯ ನಾಯಕರನ್ನು ಕರೆಸಿ ಪ್ರಚಾರ ನಡೆಸುತ್ತವೆ. ಜೆಡಿಎಸ್ ಪ್ರಾದೇಶಿಕ ಪಕ್ಷ. ಚುನಾವಣೆ ಸಮಯದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಸಂಚಾರ ನಡೆಸಿ ಪ್ರಚಾರ ಮಾಡುವುದರಿಂದ ಪಕ್ಷದ ಬಲ ಹೆಚ್ಚಲಿದೆ. ಜೆಡಿಎಸ್, ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲಿ ಪ್ರಾಬಲ್ಯ ಹೊಂದಿಲ್ಲ. ಕೆಲವು ಜಿಲ್ಲೆಗಳಿಗೆ ಮಾತ್ರ ಸೀಮಿತ ಎಂಬ ಹಣೆ ಪಟ್ಟಿ ಇದೆ. ಇದನ್ನು ಕಳಚಿ ಉತ್ತರ ಕರ್ನಾಟಕ ಭಾಗದಲ್ಲಿಯೂ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಎಂದು ಕುಮಾರಸ್ವಾಮಿ ಪ್ರಯತ್ನ ನಡೆಸುತ್ತಿದ್ದಾರೆ. ರಾಜ್ಯ ಪ್ರವಾಸ ಮಾಡುವುದರಿಂದ 'ಪಕ್ಷ ಕೆಲವು ಜಿಲ್ಲೆಗಳಿಗೆ ಮಾತ್ರ ಸೀಮಿತ' ಎಂಬ ಹಣೆ ಪಟ್ಟಿ ಕಳಚಲಿದೆ. ಕುಮಾರಪರ್ವ ಯಾತ್ರೆಯ ಸಮಾವೇಶಗಳಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದ ಯೋಜನೆಗಳ ಬಗ್ಗೆ ಜನರಿಗೆ ನೆನಪು ಮಾಡಿಕೊಡುತ್ತಿದ್ದಾರೆ. ಇದರಿಂದ, ಚುನಾವಣೆ ಸಮಯದಲ್ಲಿ ಜನ ಬೆಂಬಲ ಪಡೆಯಲು ಸಾಧ್ಯವಾಗುತ್ತದೆ ಎಂಬುದು ರಾಜಕೀಯ ವಿಶ್ಲೇಷಕರ ಮಾತು. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಗ್ರಾಮ ವಾಸ್ತವ್ಯ ಆರಂಭಿಸಿದ್ದರು. ಈಗ ಕುಮಾರಪರ್ವ ಯಾತ್ರೆಯಲ್ಲೂ ಇದನ್ನು ಮುಂದುವರೆಸಿದ್ದಾರೆ. ಗ್ರಾಮಗಳಿಗೆ ಭೇಟಿ ನೀಡಿ, ಜನರ ಸಮಸ್ಯೆ ಆಲಿಸುತ್ತಾರೆ. ಇದರಿಂದ ಜನರ ಜೊತೆ ಬೆರೆತಂತೆ ಆಗುತ್ತದೆ. ಇದು ಪಕ್ಷಕ್ಕೆ ಸಹಕಾರಿಯಾಗಲಿದೆ.

Edited By

hdk fans

Reported By

hdk fans

Comments