ನಾನು ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಜನಪ್ರಿಯ ಮಾಜಿ ಶಾಸಕರಾದ ಜೆ.ನರಸಿಂಹಸ್ವಾಮಿ
ಪಕ್ಷದ ರಾಷ್ಟ್ರೀಯ ಹಾಗೂ ರಾಜ್ಯಾಧ್ಯಾಕ್ಷರ ತೀರ್ಮಾನದಂತೆ ನಾನೇ ಮುಂದಿನ ದೊಡ್ಡಬಳ್ಳಾಪುರ ವಿಧಾನಸಭಾ ಚುನಾವಣೆಯ ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿ. ಕಾರ್ಯಕರ್ತರು ಯಾವುದೇ ಗೊಂದಲಗಳಿಗೆ ಬೆಲೆ ಕೊಡುವ ಅಗತ್ಯ ಇಲ್ಲ, ತಮ್ಮ ಪಾಡಿಗೆ ಪಕ್ಷ ಸಂಘಟನೆ ಕಡೆಗೆ ಗಮನವನ್ನು ಕೊಡಿ. ಅಷ್ಟೇ ಅಲ್ಲ ನನ್ನ ವಿರುದ್ಧ ಷಡ್ಯಂತ್ರ ಮಾಡುತ್ತಿರುವ ಹಿತಶತ್ರುಗಳು, ಮೀರ್ ಸಾಧಿಕ್ ಕೆಲಸ ಮಾಡುವವರಿಗೆ ಮುಂದಿನ ದಿನಗಳಲ್ಲಿ ಪಾಠ ಕಲಿಸುತ್ತೇನೆ ಎಂದು ನಗರದ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕರಾದ ಜೆ.ನರಸಿಂಹಸ್ವಾಮಿಯವರು ಗುಡುಗಿದರು.
Comments