ಚನ್ನಪಟ್ಟಣದಿಂದ ಅನಿತಾ ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ಎಚ್ ಡಿಕೆ ಹೇಳಿದ್ದು ಹೀಗೆ

ಚೆನ್ನಪಟ್ಟಣ ಕ್ಷೇತ್ರದಿಂದ ಅನಿತಾ ಕುಮಾರಸ್ವಾಮಿ ಸ್ಪರ್ಧೆ ಮಾಡುವುದಿಲ್ಲ ಆ ವಿಚಾರ ಸುಳ್ಳು ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.ಕನಕಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ಕಾರ್ಯಕರ್ತರಿಗೆ ಈ ವಿಚಾರವಾಗಿ ಇರಿಸುಮುರಿಸು ಮಾಡಬೇಡಿ, ಅನಿತಾ ಕುಮಾರಸ್ವಾಮಿಯವರನ್ನು ಅಭ್ಯರ್ಥಿ ಮಾಡಿ ಎಂದು ಒತ್ತಾಯ ಮಾಡಿದ್ದಾರೆ ಆದರೆ ಯಾವುದೇ ತೀರ್ಮಾನವಾಗಿಲ್ಲ ಎಂದರು. ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾದಾಗ ಚನ್ನಪಟ್ಟಣದ ಅಭ್ಯರ್ಥಿ ಯಾರೆಂದು ಉತ್ತರ ಸಿಗುತ್ತದೆ ಎಂದು ಹೇಳಿದರು.
ಇನ್ನು ಕಾಂಗ್ರೆಸ್ ಜೊತೆ ಯಾವ ಕಾರಣಕ್ಕೂ ದೋಸ್ತಿ ರಾಜಕಾರಣ ಮಾಡುವುದಿಲ್ಲ ಎಂದ ಅವರು ತಮ್ಮ ಕುಟುಂಬದಿಂದ ಇಬ್ಬರಿಗೆ ಮಾತ್ರ ಟಿಕೆಟ್ ಎಂದು ಹೇಳಿದರು.
Comments