ಜೆಡಿಎಸ್ ನ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಜ್ವಲ್ ರೇವಣ್ಣ ನೇಮಕ
ಜೆಡಿಎಸ್ ನ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಜ್ವಲ್ ರೇವಣ್ಣ ನೇಮಕಗೊಂಡಿದ್ದಾರೆ. ಜೆಡಿಎಸ್ ವರಿಷ್ಠ ನಾಯಕ ಎಚ್ ಡಿ ದೇವೇಗೌಡ ಅವರು ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದ್ದಾರೆ.ಇದೇ ಮೊದಲ ಬಾರಿ ಪ್ರಜ್ವಲ್ ರೇವಣ್ಣ ಪಕ್ಷದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಮಾಜಿ ಸಚಿವ ಎಚ್ ಡಿ ರೇವಣ್ಣ ಪುತ್ರ ಪ್ರಜ್ವಲ್ ಅವರು ಕೊನೆಗೂ ಅಧಿಕೃತವಾಗಿ ರಾಜಕೀಯ ಪ್ರವೇಶಿಸಿದ್ದಾರೆ.
ಜೆಡಿಎಸ್ ಪಕ್ಷದ ವರಿಷ್ಠ ದೇವೇಗೌಡ ಹಾಗೂ ರಾಜ್ಯಾಧ‍್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರ ಆದೇಶದ ಮೇರೆಗೆ ಕರ್ನಾಟಕ ಪ್ರದೇಶ ಜನತಾದಳ (ಜಾತ್ಯಾತೀತ) ಪಕ್ಷದ ಪ್ರಧಾನ ಕಾರ್ಯದರ್ಶಿ ಯನ್ನಾಗಿ ನೇಮಕ ಮಾಡಿದ್ದಾರೆ. ಇನ್ನು ಈ ಕುರಿತು ಪ್ರತಿಕ್ರಿಯೆ ನೀಡಿರುವ ಪ್ರಜ್ವಲ್ ರೇವಣ್ಣ ಪಕ್ಷದ ತತ್ವ ಹಾಗೂ ಸಿದ್ದಾಂತಗಳಿಗೆ ಬದ್ದರಾಗಿ,ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುತ್ತೇನೆಂದು ಹೇಳಿದ್ದಾರೆ.
Comments