ಸಿದ್ದರಾಮಯ್ಯನವರ ಆಪ್ತ ಜೆಡಿಎಸ್ ನತ್ತ ಒಲವು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ನಗರದ ಮೂವರು ಪ್ರಮುಖ ಶಾಸಕರಲ್ಲಿ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಮುನಿರತ್ನ, 2018ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ರಾಜರಾಜೇಶ್ವರಿ ನಗರ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತವಾಗಿದೆ.
ಬಸವನಗುಡಿಯ ಕಾರಂಜಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಹರ್ಷ ನಿರ್ದೇಶನದ ಸೀತಾರಾಮಯ್ಯ ಕಲ್ಯಾಣ ಚಲನಚಿತ್ರದ ಚಿತ್ರೀಕರಣ ಪೂಜೆ ಸಂದರ್ಭದಲ್ಲಿ ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹಾಗೂ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಮತ್ತು ಪುತ್ರ ನಿಖಿಲ್ ಕೂಡ ಪಾಲ್ಗೊಂಡಿದ್ದರು. ಈ ವೇಳೆ ಚಲನಚಿತ್ರ ನಿರ್ಮಾಪಕ ಹಾಗೂ ಶಾಸಕ ಮುನಿರತ್ನ ಕೂಡ ಹಾಜರಿದ್ದರು. ಚಿತ್ರೀಕರಣ ನಂತರ ಮಾತುಕತೆ ನಡೆದ ಸಂದರ್ಭದಲ್ಲಿ ಮುನಿರತ್ನ ಜೆಡಿಎಸ್ ಸೇರುವ ಬಗ್ಗೆ ಇಂಗಿತ ವ್ಯಕ್ತಪಡಿಸಿದ್ದಾರೆ.ಈ ಬಗ್ಗೆ ಎಚ್.ಡಿ.ಕುಮಾರಸ್ವಾಮಿ ಕೂಡ ಸಹಮತ ವ್ಯಕ್ತಪಡಿಸಿದ್ದು, ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದಿಂದಲೇ ಟಿಕೆಟ್ ನೀಡಲು ಇಂಗಿತ ವ್ಯಕ್ತಪಡಿಸಿದ್ದಾರೆ ಎಂದು ಉನ್ನತ ಮೂಲಗಳು ಖಚಿತಪಡಿಸಿವೆ.
Comments