2018ರ ಚುನಾವಣೆಗೆ ಜೆಡಿಎಸ್ ಪ್ರಣಾಳಿಕೆ

2018 ವಿಧಾನ ಸಭಾ ಚುನಾವಣೆಯ ಹತ್ತಿರವಾಗುತ್ತಿದ್ದಂತೆ ಪಕ್ಷಗಳು ತಮ್ಮ ಪ್ರಣಾಳಿಕೆಯ ಮೂಲಕ ಮತದಾರರನ್ನುತಮ್ಮತ್ತ ಸೆಳೆಯುವ ಪ್ರಯತ್ನದಲ್ಲಿರುತ್ತವೆ. ಆದರೆ ಜೆಡಿಎಸ್ ಈ ಹಿಂದೆಯೂ ಸಹ ಅಧಿಕಾರದಲ್ಲಿದ್ದಂತಹ ಸಂದರ್ಭದಲ್ಲಿ ತಾವು ನುಡಿದಂತೆ ರಾಜ್ಯಕ್ಕೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ ಅಷ್ಟೇ ಅಲ್ಲದೆ ಅಲ್ಪಾವಧಿಯ ಅಧಿಕಾರವಿದ್ದಾಗಲೇ ಇಷ್ಟೆಲ್ಲಾ ಮಾಡಿರುವ ಸರ್ಕಾರ, ಅಧಿಕಾರಕ್ಕೆ ಬಂದಾಗ ಏನೆಲ್ಲಾ ಮಾಡಬಹುದು ಎಂಬುದರ ಒಂದು ನೋಟವನ್ನು ಪ್ರಣಾಳಿಕೆಯಲ್ಲಿ ತಿಳಿಸಲಾಗಿದೆ .
ಮೊದಲೆನೆಯದಾಗಿ ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ರೈತರ ಸಾಲಮನ್ನಾ ಮಾಡುವುದು. ನೇಕಾರರು, ಮೀನುಗಾರರು, ಕುಶಲಕರ್ಮಿಗಳ ಸಾಲಮನ್ನಾ, 24 / 7 ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ನೀಡಲಿದ್ದಾರೆ. ಎಚ್ ಡಿಡಿ ಆರೋಗ್ಯ ಶ್ರೀ ಯೋಜನೆ ಜಾರಿ, ಬಿಪಿಎಲ್ ಕಾರ್ಡ್ ನವರಿಗೆ 1 ರಿಂದ 3 ಲಕ್ಷದ ವರೆಗೆ ಉಚಿತ ಚಿಕಿತ್ಸೆ, 1ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ, ಪುಸ್ತಕ, ಶೂ, ಬಿಪಿಎಲ್ ಪಡಿತರಿದಾರರಿಗೆ ಉಚಿತ ಮೊಬೈಲ್, ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವ ಧನ 10 ಸಾವಿರಕ್ಕೆ ಹೆಚ್ಚಳ, ರೈತರಿಗೆ ಸಬ್ಸಿಡಿ ದರದಲ್ಲಿ ಗೊಬ್ಬರ, ಬೀಜ ವಿತರಣೆ, ನೀರಾವರಿ ಯೋಜನೆಗಳಿಗೆ ಪ್ರಮುಖ ಆದ್ಯತೆ, ಎಂಬುದು ಮೂಲಗಳಿಂದ ತಿಳಿದು ಬಂದಿದೆ. ಈ ವರ್ಷ ಅಧಿಕಾರಕ್ಕೆ ಬಂದ ನಂತರ ಇನ್ನು ಅನೇಕ ಕಾರ್ಯಕ್ರಮಗಳನ್ನು ಕೈಗೊಳ್ಳಲಿದೆ.
Comments