ಜನರ ವಿಶ್ವಾಸ ಗಳಿಸಿದವರಿಗೆ ಜೆಡಿಎಸ್ ಟಿಕೆಟ್: ಎಚ್ ಡಿಕೆ

04 Dec 2017 10:50 AM |
581 Report

ಬೆಂಗಳೂರು ನಗರದ 28 ವಿಧಾನಸಭಾ ಕ್ಷೇತ್ರಗಳ ಪೈಕಿ 5 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿ ಆಗುವವರ ಹಾಗೂ ಕಾರ್ಯಕರ್ತರ ಸಭೆ ಕರೆದಿದ್ದು, ಜನರ ವಿಶ್ವಾಸ ಗಳಿಸಿದವರಿಗೆ ಟಿಕೆಟ್ ನೀಡಲಾಗುವುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ನಗರದ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ನಿಲ್ಲಿಸಲಾಗುವುದು. ಆ ಹಿನ್ನೆಲೆಯಲ್ಲಿಯೆ ಬೆಂಗಳೂರಿನ 5 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿ ಆಗುವವರ ಹಾಗೂ ಕಾರ್ಯಕರ್ತರ ಸಭೆ ಕರೆದಿದ್ದೇನೆ ಎಂದು ತಿಳಿಸಿದರು.ಬೆಂಗಳೂರಿನ ಯಲಹಂಕ, ಆರ್.ಆರ್.ನಗರ, ಯಶವಂತಪುರ, ಹೆಬ್ಬಾಳ ಸೇರಿ ಇತರೆ ವಿಧಾನಸಭಾ ಕ್ಷೇತ್ರಗಳಲ್ಲಿ ಟಿಕೆಟ್ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ ಎಂದು ಹೇಳಿದರು."ರಾಷ್ಟ್ರೀಯ ಪಕ್ಷಗಳ ಬಗ್ಗೆ ಜನರು ಬೇಸತ್ತಿದ್ದು, ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಗೆ ಜನರು ಈ ಬಾರಿ ಮತ ಹಾಕಲಿದ್ದಾರೆ. ಶಾಸಕ ಜಮೀರ್ ಅಹ್ಮದ್ ಅವರ ಬಗ್ಗೆ ನಾನು ಮಾತನಾಡುವುದಿಲ್ಲ. ದಲಿತ ಮತ್ತು ಅಲ್ಪಸಂಖ್ಯಾತರಿಗೆ ಉಪಮುಖ್ಯಮಂತ್ರಿ ಸೇರಿದಂತೆ ಇನ್ನಿತರ ವಿಚಾರಗಳ ಬಗ್ಗೆ ಅವರು ಪ್ರತಿಕ್ರಿಯೆ ನೀಡುವುದು ಸರಿಯಲ್ಲ" ಎಂದು ಹೇಳಿದರು.

Edited By

Shruthi G

Reported By

hdk fans

Comments