ಸರ್ಕಾರದ ಹಿಂದೂ ವಿರೋಧಿ ನೀತಿಗೆ ಆಕ್ರೋಶ, ಬಿಜೆಪಿ ಜಿಲ್ಲಾ ಯುವ ಮೋರ್ಚಾದಿಂದ ಪ್ರತಿಭಟನೆ, ಸಿಎಂ ರಾಜೀನಾಮೆಗೆ ಒತ್ತಾಯ





ದೊಡ್ಡಬಳ್ಳಾಪುರ ಗ್ರಾಮಾಂತರ ಜಿಲ್ಲೆ ಯುವ ಮೋರ್ಚಾವತಿಯಿಂದ ತಾಲ್ಲೂಕು ಕಛೇರಿ ವೃತ್ತದಲ್ಲಿ ರಾಜ್ಯ ಸರ್ಕಾರದ ಹಿಂದೂ ವಿರೋಧಿ ನೀತಿ ಹಾಗೂ ಸಂಸದ ಪ್ರತಾಪ್ ಸಿಂಹ ಬಂಧನ ಖಂಡೀಸಿ ಪ್ರತಿಭಟನೆ ಮಾಡಲಾಯಿತು. ಹುಣಸೂರಿನಲ್ಲಿ ಹನುಮ ಜಯಂತಿ ಆಚರಣೆ ಅನುಮತಿ ನಿರಾಕರಿಸಿ ಹನುಮ ಮಾಲಾಧಾರಿಗಳ ಮೇಲೆ ಲಾಠಿಪ್ರಹಾರ ನಡೆಸಿದ್ದಲ್ಲದೆ ಪೋಲೀಸ್ ದೌರ್ಜನ್ಯ ವಿರುದ್ಧ ಪ್ರತಿಭಟಿಸಿದ ಸಂಸದ ಪ್ರತಾಪ್ ಸಿಂಹರನ್ನು ಬಂಧಿಸುವ ಮೂಲಕ ರಾಜ್ಯ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಬಿಜೆಪಿ ನಗರ ಅಧ್ಯಕ್ಷ ರಂಗರಾಜು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಕೋಮು ವಿಷ ಬೀಜ ಬಿತ್ತುತ್ತಿರುವ ಮುಖ್ಯಮಂತ್ರಿ ಹಾಗೂ ಗೃಹಸಚಿವರು ಅಧಿಕಾರದಲ್ಲಿರಲು ಅರ್ಹತೆ ಕಳೆದುಕೊಂಡಿದ್ದು, ಕೂಡಲೇ ರಾಜೀನಾಮೆ ನೀಡಬೇಕೆಂದು ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಶಿವಶಂಕರ್ ಒತ್ತಾಯಿಸಿದರು.
ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ನಗರ ಯುವ ಮೋರ್ಚಾ ಅಧ್ಯಕ್ಷ ಬಂತಿ ವೆಂಕಟೇಶ್, ಕಾರ್ಯದರ್ಶಿ ಕಾಂತರಾಜ್, ಉಪಾಧ್ಯಕ್ಷ ಶಿವು, ಒಬಿಸಿ ಅಧ್ಯಕ್ಷ ರಾಮ್ ಕಿಟ್ಟಿ, ಮಹಿಳಾ ಮೋರ್ಚ ಅಧ್ಯಕ್ಷೆ ಗಿರಿಜ, ನಗರಸಭೆ ಸದಸ್ಯರಾದ ಮುದ್ದಪ್ಪ, ವೆಂಕಟರಾಜು, ಎನ್.ಕೆ.ರಮೇಶ್ ಇದ್ದರು
Comments