ಎಚ್ ಡಿಕೆ ಹುಟ್ಟು ಹಬ್ಬದಂದು 'ಕುರುಕ್ಷೇತ್ರ'ದ ಎರಡನೇ ಟೀಸರ್ ಬಿಡುಗಡೆ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 50 ನೇ ಸಿನಿಮಾ ಕುರುಕ್ಷೇತ್ರ ಸಿನಿಮಾದ ಶೂಟಿಂಗ್ ಕೊನೆಯ ಹಂತ ತಲುಪಿದ್ದು, ಚಿತ್ರ ಸಾಕಷ್ಟು ನಿರೀಕ್ಷೆಯನ್ನು ಹುಟ್ಟು ಹಾಕಿದೆ.
ಬಹುದೊಡ್ಡ ತಾರಾಗಣವಿರುವ ಕುರುಕ್ಷೇತ್ರ ಸಿನಿಮಾದ ಮೊದಲ ಟೀಸರ್ ಈಗಾಗಲೇ ಬಿಡುಗಡೆ ಆಗಿ ಸದ್ದು ಮಾಡುತ್ತಿದ್ದು, ಸದ್ಯದಲ್ಲೇ ಈ ಸಿನಿಮಾದ ಎರಡನೇ ಟೀಸರ್ ಬಿಡುಗಡೆ ಆಗಲಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹುಟ್ಟು ಹಬ್ಬದ ಪ್ರಯುಕ್ತ ಕುರುಕ್ಷೇತ್ರ ಚಿತ್ರದ ಇನ್ನೊಂದು ಟೀಸರ್ ಬಿಡುಗಡೆ ಆಗಲಿದೆ. ಡಿಸೆಂಬರ್ 16 ಕ್ಕೆ ಕುಮಾರಸ್ವಾಮಿ ಅವರ ಹುಟ್ಟು ಹಬ್ಬವಿದ್ದು, ಇದೇ ದಿನ ಟೀಸರ್ ಬಿಡುಗಡೆ ಮಾಡಲಾಗುವುದಂತೆ.
Comments