ಕುಮಾರಸ್ವಾಮಿ ತಪ್ಪು ಮಾಹಿತಿ ನೀಡಿದ್ದಾರೆ : ಡಿಕೇಶಿ

05 Dec 2017 11:34 AM |
2164 Report

ಕುಮಾರಸ್ವಾಮಿ ಅವರ ಆರೋಪ ಸತ್ಯಕ್ಕೆ ದೂರವಾದುದು. ಯಾರೋ ಅವರಿಗೆ ತಪ್ಪು ಮಾಹಿತಿ ಕೊಟ್ಟಿರಬೇಕು. ಇಲ್ಲವೇ, ರಾಜಕಾರಣಕ್ಕಾಗಿ ಈ ರೀತಿ ಮಾತನಾಡಿರಬೇಕು. ಸಿದ್ದರಾಮಯ್ಯ ಅವರು ಕಾಂಗ್ರೆಸ್‌ಗೆ ಬಂದದ್ದು ಪಕ್ಷ ಬಲವರ್ಧನೆಗಾಗಿ. ಅವರು ಎಲ್ಲಿ ಇರುತ್ತಾರೋ ಅಲ್ಲಿ ನಿಷ್ಠೆಯಿಂದ ಕೆಲಸ ಮಾಡುತ್ತಾರೆ. ಯಾವತ್ತೂ ಅವರು ಪಕ್ಷ ನಿಷ್ಠೆಗೆ ವಿರುದ್ಧವಾಗಿ ನಡೆದುಕೊಂಡವರಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದರು.

 ಸಿದ್ದರಾಮಯ್ಯ ಅವರನ್ನು ಬದಲಾಗಿ ಸಮರ್ಥಿಸಿಕೊಂಡಿರುವ ಇಂಧನ ಸಚಿವ ಡಿ.ಕೆ. ಶಿವಕುಮಾರ್, ಆಪರೇಷನ್ ಕಮಲಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕುಮ್ಮಕ್ಕು ನೀಡಿದ್ದರು ಎನ್ನುತ್ತಿರುವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಯಾರೋ ತಪ್ಪು ಮಾಹಿತಿ ನೀಡಿದ್ದಾರೆ. ಸಿದ್ದರಾಮಯ್ಯ ಅವರು ಎಂದೂ ಅಂತಹ ಕೆಲಸಕ್ಕೆ ಹೋದವರಲ್ಲ ಎಂದು ಇಂಧನ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.

Edited By

dks fans

Reported By

dks fans

Comments