ಯೋಗೇಶ್ವರ್‌ ಪಕ್ಷಕ್ಕೆ ದ್ರೋಹ ಬಗೆದಿದ್ದಾರೆ : ಡಿಕೆಶಿ ಟೀಕೆ 

05 Dec 2017 3:44 PM |
2224 Report

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೇ ಯೋಗೇಶ್ವರ್ ಅವರನ್ನು ದುರ್ಬಲರನ್ನಾಗಿ ಮಾಡಬಹುದಾಗಿತ್ತು. ಆದರೆ, ನಾನು ವೈಯಕ್ತಿಕ ವಿಚಾರವೇ ಬೇರೆ ಎಂದುಕೊಂಡು ಪ್ರತಿಕಾರದ ರಾಜಕೀಯ ಮಾಡಲಿಲ್ಲ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅವರು ಹೇಳಿದವರಿಗೆ ಟಿಕೆಟ್ ಹಾಗೂ ಸೂಕ್ತ ಸ್ಥಾನಮಾನ ನೀಡಲಾಗಿತ್ತು. ಆದರೂ ಪಕ್ಷಕ್ಕೆ ದ್ರೋಹ ಬಗೆದಿದ್ದಾರೆ ಎಂದು ಟೀಕಿಸಿದರು.

ಚನ್ನಪಟ್ಟಣ ಮತ್ತು ರಾಮನಗರದಲ್ಲಿ ಗೆಲುವು ಸಾಧಿಸಲು ದೊಡ್ಡ ನಾಯಕರೇ ಬೇಕಾಗಿಲ್ಲ. ಸಾಮಾನ್ಯ ಕಾರ್ಯಕರ್ತರಿದ್ದರೆ ಸಾಕು. ಕಾರ್ಯಕರ್ತರ ಧ್ವನಿಯಾಗಿರುವ ವ್ಯಕ್ತಿಯೇ ಅಭ್ಯರ್ಥಿ ಆಗಲಿದ್ದಾರೆ. ನಾವು ನೀವೆಲ್ಲರು ಒಗ್ಗಟ್ಟಿನಿಂದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸೋಣ ಎಂದು ಡಿಕೆಶಿ ಕರೆ ನೀಡಿದರು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಗುರಿ ಹೊಂದಿದಿದ್ದೇವೆಯೇ ಹೊರತು, ಯಾವುದೇ ಕ್ಷೇತ್ರದಲ್ಲಿ ಯಾರೊಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ. ಆ ಅಗತ್ಯವೂ ಇಲ್ಲವೆಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

Edited By

dks fans

Reported By

dks fans

Comments