ಡಿ.15ರಂದು ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಎಚ್ ಡಿಕೆ

ಡಿಸೆಂಬರ್ 15ರಂದು ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.
ಇಂದು ನಗರದಲ್ಲಿ ಅಭಯ ಆಂಜನೇಯ ಪ್ರತಿಮೆಗೆ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಸಿದ್ಧಪಡಿಸಲಾಗುತ್ತಿದ್ದು, ಒಂದಕ್ಕಿಂತ ಹೆಚ್ಚು ಆಕಾಂಕ್ಷಿಗಳು ಇರುವ ಕಡೆ ಒಮ್ಮತದ ಅಭ್ಯರ್ಥಿಯ ಆಯ್ಕೆಗಾಗಿ ಸಭೆಗಳನ್ನು ನಡೆಸುತ್ತಿದ್ದೇನೆ ಎಂದರು.ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿ ಅವರು ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಇನ್ನು ನಿರ್ಧಾರವಾಗಿಲ್ಲ ಎಂದ ಎಚ್ ಡಿಕೆ, ಚನ್ನಪಟ್ಟಣದಲ್ಲಿ ಸ್ಥಳೀಯರನ್ನೇ ಅಭ್ಯರ್ಥಿಯಾಗಿ ಆಯ್ಕೆ ಮಾಡಿಕೊಳ್ಳುವಂತೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.ಇದೇ ವೇಳೆ ಹನುಮ ಜಯಂತಿ ನೆಪದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಸಮಾಜವನ್ನು ಒಡೆಯುತ್ತಿದ್ದು, ಕೋಮುವಾದವನ್ನು ಪ್ರಚೋದಿಸುತ್ತಿವೆ ಎಂದು ವಾಗ್ದಾಳಿ ನಡೆಸಿದರು.
Comments