ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ಕೊಟ್ಟ ಎಚ್ ಡಿಕೆ
ನಗರದ ಅಭಯ ಆಂಜನೇಯ ಪ್ರತಿಮೆಗೆ ಮಂಗಳವಾರ ಪೂಜೆ ಸಲ್ಲಿಸಿದ ಬಳಿಕ ಪತ್ರಕರ್ತರ ಜೊತೆ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿಯವರು, ರಾಮನಗರ ನಗರಸಭೆ ವ್ಯಾಪ್ತಿಯಲ್ಲಿ ಬಡವರಿಗೆ ನಿವೇಶನಗಳನ್ನು ಹಂಚುವ ನೆಪದಲ್ಲಿ ಕೆಲವರು ಸರ್ಕಾರದ ಹಣ ದೋಚುವ ಯತ್ನ ನಡೆಸಿದ್ದಾರೆ. ಅಧಿಕಾರಿಗಳು ಅವರ ಜೊತೆ ಕೈ ಜೋಡಿಸಿದಲ್ಲಿ ಜೈಲು ಪಾಲಾಗಬೇಕಾಗುತ್ತದೆ ಎಂದು ಕುಮಾರಸ್ವಾಮಿ ಎಚ್ಚರಿಸಿದರು.
ನಾಲ್ಕೈದು ಜನ ಸೇರಿಕೊಂಡು ರೈತರಿಂದ ಅಲ್ಪ ಹಣಕ್ಕೆ ಸುಮಾರು 67 ಎಕರೆ ಜಮೀನು ಖರೀದಿಸಿ ಸರ್ಕಾರಕ್ಕೆ ಎಕರೆಗೆ ಕೋಟಿ ರೂಪಾಯಿಗೆ ಮಾರಲು ಹುನ್ನಾರ ನಡೆಸಿರುವುದು ಗಮನಕ್ಕೆ ಬಂದಿದೆ. ಹೀಗಾಗಿ ಸಂಬಂಧಿಸಿದ ಆಯ್ಕೆ ಸಮಿತಿ ಸಭೆಯನ್ನು ಮುಂದೂಡುವಂತೆ ಸೂಚಿಸಿದ್ದೇನೆ ಎಂದು ಕುಮಾರಸ್ವಾಮಿ ಅವರು ತಿಳಿಸಿದರು.
Comments