ಜೆಡಿಎಸ್ ರಾಜ್ಯ ಉಪಾಧ್ಯಕ್ಷರಾಗಿ ದೇವರಾಜ್ ನೇಮಕ

ಜಾತ್ಯಾತೀತ ಜನತಾದಳದ ಮುಖಂಡ ಹೆಚ್.ಹೆಚ್.ದೇವರಾಜ್ ಅವರು ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
ಪ್ರಸ್ತುತ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿರುವ ದೇವರಾಜ್ ಅವರನ್ನು ಮಾಜಿ ಪ್ರಧಾನಿ, ಪಕ್ಷದ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ರಾಜ್ಯ ಉಪಾಧ್ಯಕ್ಷರನ್ನಾಗಿ ನಿಯುಕ್ತಿಗೊಳಿಸಿ ಆದೇಶ ಹೊರಡಿಸಿದ್ದಾರೆ.ದೇವರಾಜ್ ಅವರು ಜೆಡಿಎಸ್‍ನ ಜಿಲ್ಲಾಧ್ಯಕ್ಷ, ರೈತ ವಿಭಾಗದ ಅಧ್ಯಕ್ಷ ಮತ್ತು ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಸೇರಿದಂತೆ ಪಕ್ಷದ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ.
Comments