ಜೆಡಿಎಸ್ ‘ಕಿಂಗ್’ ಆಗಿ ಹೊರಹೊಮ್ಮಲಿದೆ : ಎಚ್ ಡಿಕೆ
2018ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ‘ಕಿಂಗ್’ ಆಗಿ ಹೊರಹೊಮ್ಮಲಿದೆಯೇ ಹೊರತು ಕಿಂಗ್ ಮೇಕರ್ ಆಗಲ್ಲ’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಯವರು ‘113 ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲ್ಲುವ ಗುರಿ ಇಟ್ಟುಕೊಂಡಿದೆ. ಡಿ.15ರಂದು ಪಕ್ಷವು ಆಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಲಿದೆ. ಇದರಲ್ಲಿ ತುಮಕೂರು ಜಿಲ್ಲೆಯ 11 ವಿಧಾನ ಸಭಾ ಕ್ಷೇತ್ರಗಳ ಎಲ್ಲ ಅಭ್ಯರ್ಥಿಗಳ ಹೆಸರು ಬಹುತೇಕ ಪ್ರಕಟವಾಗಲಿದೆ. ಪಕ್ಷದ ಹಾಲಿ ಶಾಸಕರಿಗೆ ಟಿಕೆಟ್ ನೀಡಲಾಗುವುದು. 113 ಸ್ಥಾನ ಗುರಿ ತಲುಪಬೇಕಾದರೆ ಗೆಲ್ಲುವಂತಹ ಅಭ್ಯರ್ಥಿಗಳಿಗೆ ಟಿಕೆಟ್ ನೀಡಬೇಕಾಗುತ್ತದೆ. ಹೀಗಾಗಿ, ಅಂತಹ ಅಭ್ಯರ್ಥಿಗಳನ್ನು ಗುರುತಿಸಲಾಗಿದೆ’ ಎಂದರು.ರಾಜ್ಯದ ಜನರ ತೆರಿಗೆ ಹಣವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅಭಿವೃದ್ಧಿ ಯೋಜನೆ ಅನುಷ್ಠಾನ ಕಾರ್ಯಕ್ರಮದ ಹೆಸರಿನಲ್ಲಿ ರಾಜಕೀಯ ಸಮಾವೇಶ ಮಾಡುತ್ತಿದ್ದಾರೆ. ಸಮಾವೇಶ ನಡೆಯುವ ಜಿಲ್ಲೆಗಳ ಜಿಲ್ಲಾಧಿಕಾರಿಗಳೇ ಸಮಾವೇಶಕ್ಕೆ ಶಾಮಿಯಾನ, ಕುರ್ಚಿ ಹಾಕಲು ಟೆಂಡರ್ ಕರೆಯುತ್ತಿದ್ದಾರೆ’ ಎಂದು ಆರೋಪಿಸಿದರು.
Comments